ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರಿಂದ ಅಗ್ರಹ
ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರಿಂದ ಅಗ್ರಹ ಯಳಂದೂರು : ಇಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗ ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣ ಮೂರ್ತಿ ಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಿದ್ದಾರೆ . ರಾಜ್ಯದಲ್ಲಿಯೇ ಮೀಸಲು ಕ್ಷೇತ್ರದಿಂದ ಅತ್ಯಧಿಕ ಮತಗಳನ್ನು ಪಡೆದು ಆಯ್ಕೆಯಾಗಿರುವ ಪ್ರಾಮಾಣಿಕ ದಕ್ಷ ಆಡಳಿತಗಾರರಾಗಿದ್ದ ದಿವಂಗತ ಶ್ರೀ ಬಿ ರಾಚಯ್ಯನವರ ಪುತ್ರ ಎ ಆರ್ ಕೃಷ್ಣಮೂರ್ತಿಯವರಿಗೆ ಮುಂಬರುವ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವರನ್ನಾಗಿ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್ ವಿ ಚಂದ್ರು ಒತ್ತಾಯ ಮಾಡಿದರು. ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಮತ್ತು ಸಂಭಾವ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇವೆ.. ಶಾಸಕರಾದ ಎ ಆರ್ ಕೃಷ್ಣಮೂರ್ತಿಯವರು ಮೈಸೂರು ಮತ್ತು ಬೆಂಗಳೂರು ವಿಭಾಗದಲ್ಲಿ ತನ್ನದೇಯಾದ ವರ್ಚಸ್ಸು ಹೊಂದಿದ್ದು ಚಾಮರಾಜನಗರ ಜಿಲ್ಲೆಯ ನಾಡಿಮಿಡಿತ ಅರಿತವರಾಗಿದ್ದಾರೆ ಇವರಿಗೆ ರಕ್ತಗತವಾಗಿ ಆಡಳಿತಾತ್ಮಕ ಅನುಭವವಿದ್ದು,ಇವರು ದಕ್ಷತೆ ಮತ್ತು ಪ್ರಾಮಾಣಿಕತೆವುಳ್ಳ ಜನಪರ ರಾಜಕಾರಣಿಯಾಗಿದ್ದಾರೆ ಎಂದು ತಿಳಿಸಿದರು . ನಂತರ ಕಂದಹಳ್ಳಿ ನಂಜುಂಡ ಸ್ವಾಮಿ ಮಾತನಾಡಿ...