ಕಾಳಿಕಾಂಬಾ-ಕಮಟೇಶ್ವರ ದೇವಾಲಯದ 4ನೇ ವಾರ್ಷಿಕೋತ್ಸವ ಸಂಭ್ರಮ ಸಹಸ್ರಾರು ಭಕ್ತರಿಗೆ ಅನ್ನ ಸಂತರ್ಪಣೆ

ಸಂತೇಮರಹಳ್ಳಿ : ಸಮೀಪದ ಉಮ್ಮತ್ತೂರು ಗ್ರಾಮದ ಶ್ರೀ ಕಾಳಿಕಾಂಬಾ ಕಮಟೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನೆಯ 4ನೇ ವಾರ್ಷಿಕೋತ್ಸವವು ಶನಿವಾರ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆ 7 ಗಂಟೆಯಿಂದ ಪುರೋಹಿತರಾದ ಬಿ ಎಸ್ ಪರಮೇಶ್ವರ್ ಶರ್ಮ ಅವರ ಆಚಾರ್ಯತ್ವದಲ್ಲಿ ಗಣಪತಿ ಪೂಜೆ, ನವಗ್ರಹ ಪೂಜೆ, ಮೃತ್ಯುಂಜಯ ಪೂಜೆ, ವಿಶ್ವಕರ್ಮ ಹೋಮ, ಪ್ರಧಾನ ಹೋಮ ನಾನಾ ರೀತಿಯ ಅಭಿಷೇಕ ನೆರವೇರಿಸಲಾಯಿತು. ಬಳಿಕ ಮೂಲ ವಿಗ್ರಹಗಳಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಪೂರ್ಣಾಹುತಿ, ಮಹಾಮಂಗಳಾರತಿ ನಡೆದು ತೀರ್ಥ-ಪ್ರಸಾದ ವಿನಿಯೋಗ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು ಜಗದ ಜನನಿ ಕಾಳಿಕಾಂಬಾ ಪುಣ್ಯ ಸ್ಥಳದಲ್ಲಿ 4ನೇ ವಾರ್ಷಿಕೋತ್ಸವದ ಅಂಗವಾಗಿ ಹಲವಾರು ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಈ ಕಾಳಿಕಾಂಬಾ ದೇವಾಲಯವು ಸುಮಾರು 250 ವರ್ಷಗಳ ಇತಿಹಾಸ ಹೊಂದಿದೆ. ಶಿಥಿಲಾವಸ್ಥೆಯಲ್ಲಿದ್ದ ದೇವಾಲಯವನ್ನು ಉಮ್ಮತ್ತೂರು ಗ್ರಾಮದ ನಾಗಲಿಂಗ ಚಾರ್ ಅವರ ಅಧ್ಯಕ್ಷತೆಯಲ್ಲಿ ಕ್ಷೇಮಾಭಿವೃದ್ಧಿ ಸಂಘ ರಚಿಸಿ, ಹಿರಿಯ ಮುತ್ಸದ್ದಿ ವೇ. ಬ್ರ. ಶ್ರೀ ನಂಜುಂಡಸ್ವಾಮಿಯವರ ಸಾನಿಧ್ಯದಲ್ಲಿ ಪುನರ್ ಜೀರ್ಣೋದ್ಧಾರ ಮಾಡಿ ಪ್ರತಿಷ್ಠಾಪನೆ ಮಾಡಲಾಗಿದೆ. ಇಂದು ಇದು ಪುಣ್ಯ ಕ್ಷೇತ್ರವಾಗಿ ಮಾರ್ಪಾಡಾಗಿದೆ" ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು. ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ಉಮ್ಮತ್ತೂರಿನ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಈ ವೇಳೆ ಅಧ್ಯಕ್ಷರು ಉಪಾಧ್ಯಕ್ಷರು ಗೌರವಾಧ್ಯಕ್ಷರು ಮುರುಗೇಶ್, ಕಾರ್ಯದರ್ಶಿ ದೊರೆಸ್ವಾಮಿ, ಮಹದೇವಪ್ಪ, ಮಂಜುನಾಥ್ ಸೇರಿದಂತೆ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ