ಮಾದಕ ದ್ರವ್ಯ ಕುರಿತು ಜಾಗೃತಿ ಕಾರ್ಯಕ್ರಮ



     ಸಂತೇಮರಹಳ್ಳಿ : ಸರ್ಕಾರಿ ಪ್ರೌಢ ಶಾಲೆ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜು ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಹಾಗೂ ಜಾಗೃತಿ ಕುರಿತು ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು


ಈ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು


ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವನ್ನು ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತೇಮರಹಳ್ಳಿ ಗ್ರಾಮ ಆಡಿಟೋರಿಯಂ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 

ಈ ಸಂದರ್ಭದಲ್ಲಿ ಸಂತೇಮರಹಳ್ಳಿ ಪಿ ಎಸ್ ಐ ಮೋಹನ್ ಕುಮಾರ್ ಮಾತನಾಡಿ ಇತ್ತೀಚಿನ ಮಾದಕ ದ್ರವ್ಯದ ಕುರಿತು ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಅರಿವು ಮೂಡಿಸಲಾಯಿತು.

ಮಾದಕ ವಸ್ತುಗಳಿಂದ ಆರೋಗ್ಯದ ಮೇಲೆ ವಿಪರೀತ ಪರಿಣಾಮ ಬೀರುವುದರಿಂದ ಜಾಗೃತರಾಗುವುದು ಅತ್ಯಮೂಲ್ಯ ಎಂದರು. 

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟ ಗೌರಮ್ಮ, ಎ ಎಸ್ ಐ ಆಕಾಶ್ ಬಾಬು, ಪ್ರೊ ಪಿ ಎಸ್ ಶಂಕರ್ ಪ್ರಾಂಶುಪಾಲರು ಸಂಯುಕ್ತ ಪದವಿ ಪೂರ್ವ ಕಾಲೇಜು ಸಂತೇಮರಹಳ್ಳಿ, ಪ್ರಭುಸ್ವಾಮಿ ಪ್ರಾಧ್ಯಾಪಕರು ಹಾಗೂ ಸಂತೇಮರಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್, ಚಿಕ್ಕರಾಜು ಹಾಗೂ ಜೆಎಸ್ಎಸ್ ಪ್ರೌಢಶಾಲಾ, ಸಂಯುಕ್ತ ಪದವಿ ಪೂರ್ವ ಕಾಲೇಜು, ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ: G1 ನ್ಯೂಸ್ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ