ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಮಹಾಸಭಾ ರಾಷ್ಟ್ರೀಯ ಸದಸ್ಯರಾದ ಎನ್ ರಿಚ್ ಮಹದೇವಸ್ವಾಮಿ ಹಾಗೂ ಮುಖಂಡರುಗಳಿಂದ ಅಭಿನಂದಿಸಲಾಯಿತು
ಬೆಂಗಳೂರು: ನೂತನವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಶರಣ ಈಶ್ವರ ಬಿ ಖಂಡ್ರೆ ಅವರನ್ನು ಮಹಾಸಭಾ ರಾಷ್ಟ್ರೀಯ ಸದಸ್ಯರಾದ ಎನ್ ರಿಚ್ ಮಹದೇವಸ್ವಾಮಿ ಹಾಗೂ ರಾಜ್ಯ ಪದಾಧಿಕಾರಿಗಳ ನಿಯೋಗ ಮಂಗಳವಾರ ಭೇಟಿ ಮಾಡಿ ಅಭಿನಂದಿಸಿಲಾಯಿತು
ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್‌ನಲ್ಲಿ ನಡೆದ ಈ ಭೇಟಿಯಲ್ಲಿ, ಸಚಿವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವ ಸಲ್ಲಿಸಲಾಯಿತು. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು ಭಾಗದ ಮಹಾಸಭಾದ ರಾಜ್ಯ ಉಪಾಧ್ಯಕ್ಷರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಹಲವು ಪ್ರಮುಖ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗ್ರಾಮೀಣ ಭಾಗದ ಬೇಡಿಕೆಗಳ ಮನವಿ
ಭೇಟಿಯ ವೇಳೆ ಸಚಿವರೊಂದಿಗೆ ಮುಖಂಡರುಗಳು ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಭಾಗದ ಹಲವು ಜ್ವಲಂತ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿ ಚರ್ಚಿಸಿದರು.
ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ ಹನೂರು ತಾಲ್ಲೂಕುಗಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆ ಅಭಿವೃದ್ಧಿ, ಗ್ರಾಮ ಪಂಚಾಯತ್ ಗಳಿಗೆ ಹೆಚ್ಚಿನ ಅನುದಾನ, ನರೇಗಾ ಕೂಲಿ ಬಾಕಿ ಪಾವತಿ" ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು ಎಂದು ರಾಷ್ಟ್ರೀಯ ಮಹಾಸಭಾ ಸದಸ್ಯರಾದ ಎನ್ ರಿಚ್ ಮಹದೇವಸ್ವಾಮಿ ತಿಳಿಸಿದರು.
ಸಚಿವರ ಭರವಸೆ
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ, "ಗ್ರಾಮೀಣಾಭಿವೃದ್ಧಿ ನನ್ನ ಮೊದಲ ಆದ್ಯತೆ. ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನಿಮ್ಮ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ" ಎಂದು ಭರವಸೆ ನೀಡಿದರು. ಇದೇ ವೇಳೆ, ಮುಂದಿನ ದಿನಗಳಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ
ವರದಿ:ಹೊನ್ನೂರು ಪರಮೇಶ್

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ