ಯಳಂದೂರು ನಿಷೇಧಿತ ಕೇರಳ ಲಾಟರಿ ಮಾರಾಟಗಾರನ ಬಂಧನ

ವರದಿ: ಮಣಿಕಂಠ ನಾಯಕ್ ಗೂಳಿಪುರ

ಯಳಂದೂರು: ಪಟ್ಟಣದ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಯಳಂದೂರು ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಶ್ರೀ ನಂದಕುಮಾರ್ ಮತ್ತು ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯಿಂದ ₹9,000 ಮೌಲ್ಯದ ಒಟ್ಟು 180 ಲಾಟರಿ ಟಿಕೆಟ್‌ಗಳು ಹಾಗೂ ಲಾಟರಿ ಮಾರಾಟದ ₹15,200 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಯಳಂದೂರು ಪೊಲೀಸ್ ಠಾಣೆಯಲ್ಲಿ ಬಂಧಿತ ಆರೋಪಿ ಎಂ.ಸಿ. ಸಿದ್ದರಾಜು ಮೇಲೆ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯುತ್ತಮವಾಗಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ. ಮುಂದಿನ ದಿನಗಳಲ್ಲೂ ಇಂತಹ ಅಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಿಷೇಧಿತ ಕೇರಳ ಲಾಟರಿ ಮಾರಾಟಗಾರನ ಬಂಧನ.ಯಳಂದೂರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ