ಸಂತೇಮರಹಳ್ಳಿ: ಜ್ಞಾನ ಸಿಂಧು ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ಅರಿವು ಕಾರ್ಯಕ್ರಮ - ಆಸ್ತಿ ವಾಪಸ್ ಪಡೆಯಬಹುದು ಎಂದ ನ್ಯಾಯಾಧೀಶರು.

 

ಸಂತೇಮರಹಳ್ಳಿ ಜ್ಞಾನ ಸಿಂಧು ವೃದ್ಧಾಶ್ರಮದಲ್ಲಿ ವಿಶ್ವ ಹಿರಿಯ ನಾಗರಿಕರ ನಿಂದನೆ ಜಾಗೃತಿ ದಿನ. ಆಸ್ತಿ ಬರೆಸಿಕೊಂಡು ತಂದೆ-ತಾಯಿಯನ್ನು ದೂರ ತಳ್ಳಿದ್ರೆ ಕಾನೂನು ಕ್ರಮ - ನ್ಯಾಯಾಧೀಶ ಈಶ್ವರ್ ಎಚ್ಚರಿಕೆ.

ಸಂತೇಮರಹಳ್ಳಿ: ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಜ್ಞಾನ ಸಿಂಧು ವೃದ್ಧಾಶ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ(ರಿ) ಚಾಮರಾಜನಗರ ಇವರ ವತಿಯಿಂದ ವಿಶ್ವ ಹಿರಿಯ ನಾಗರಿಕರ ನಿಂದನೆ ಜಾಗೃತಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜ್ಞಾನ ಸಿಂಧು ವೃದ್ಧಾಶ್ರಮಕ್ಕೆ ಆಗಮಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಯುತ ಈಶ್ವರ್ ರವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ನ್ಯಾಯಾಧೀಶ ಈಶ್ವರ್ "ಹಿರಿಯ ನಾಗರಿಕರಲ್ಲಿ ಕಾನೂನು ಅರಿವು ಹೆಚ್ಚಿಸಿ, ಹಿರಿಯ ನಾಗರಿಕರ ಹಕ್ಕುಗಳು, ಕಾನೂನು ರಕ್ಷಣೆ, ಪಿಂಚಣಿ ಸೌಲಭ್ಯಗಳ ಬಗ್ಗೆ ತಿಳಿಸಿ ಅವರ ಜೀವನವನ್ನು ಸುರಕ್ಷಿತ ಹಾಗೂ ಗೌರವಯುತವಾಗಿಸುವುದು ಈ ಕಾರ್ಯಕ್ರಮದ ಉದ್ದೇಶ" ಎಂದರು.

"ಹಿರಿಯರನ್ನು ಆಸ್ತಿ ಬರೆಸಿಕೊಂಡು ಪೋಷಕರನ್ನು ದೂರ ತಳ್ಳುವ ಮಕ್ಕಳ ವಿರುದ್ಧ ಕಾನೂನು ರೀತಿಯಲ್ಲಿ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳುವ ಅವಕಾಶವಿದೆ. ಇಲ್ಲವಾದಲ್ಲಿ ಕಾನೂನು ರೀತಿಯಲ್ಲಿ ತಕ್ಕ ಪಾಠ ಕಲಿಸಬಹುದು. ಚಿಕ್ಕವಯಸ್ಸಿನಲ್ಲಿ ತಂದೆ-ತಾಯಿಗಳು ಮಕ್ಕಳನ್ನು ಲಾಲನೆ-ಪಾಲನೆ ಮಾಡಿ ಬೆಳೆಸಿರುತ್ತಾರೆ. ಹಾಗೆಯೇ ತಂದೆ-ತಾಯಿಗೆ ವಯಸ್ಸಾದಾಗ ಮಕ್ಕಳು ಚೆನ್ನಾಗಿ ನೋಡಿಕೊಳ್ಳಬೇಕು" ಎಂದು ತಿಳಿಸಿದರು.

ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ

ಕಾರ್ಯಕ್ರಮದಲ್ಲಿ ಹಿರಿಯರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳು ಮಾತನಾಡಿ, ಹಿರಿಯ ನಾಗರಿಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿದ್ದು, ಯಾವುದೇ ರೀತಿಯ ಅನ್ಯಾಯ ಅಥವಾ ಶೋಷಣೆಗೆ ಒಳಗಾದಲ್ಲಿ ಕಾನೂನು ನೆರವು ಪಡೆಯಬೇಕೆಂದು ಸಲಹೆ ನೀಡಿದರು.

ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಹಾಗೂ ಸಂದೇಹಗಳಿಗೆ ಪರಿಹಾರ ಪಡೆದುಕೊಂಡರು.

ಗಣ್ಯರ ಉಪಸ್ಥಿತಿ

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟ್ ರಿಚ್ ವರ್ಕರ್ ಶ್ರೀಯುತ ಸಿದ್ದಶೆಟ್ಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ರಘು, ಜ್ಞಾನ ಸಿಂಧು ವೃದ್ಧಾಶ್ರಮ ಅಧೀಕ್ಷಕ ಶ್ರೀಯುತ ಮಹದೇವಸ್ವಾಮಿ, ಸಿಬ್ಬಂದಿಗಳಾದ    ಪ್ರಕಾಶ್ ಹೆಚ್.ಬಿ ಹೆಗ್ಗವಾಡಿಪುರ, ಪುಷ್ಪ, ಹಾಗೂ ಹಿರಿಯ ನಾಗರಿಕರು ಭಾಗವಹಿಸಿದ್ದರು.


ವರದಿ: G1 News ಹೊನ್ನೂರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ