ಅಧಿಕಾರಿಗಳ ಗೈರು ವಿರೋಧಿಸಿ SC/ST ಹಿತರಕ್ಷಣಾ ಸಭೆ ಬಹಿಷ್ಕಾರ - ದಲಿತ ಮುಖಂಡರ ಆಕ್ರೋಶ



   ಯಳಂದೂರು : ಕೆಲವು ಅಧಿಕಾರಿಗಳು ಗೈರು ಹಾಜರಾಗಿದ್ದನ್ನೂ ವಿರೋಧಿಸಿ ತಾಲ್ಲೂಕು ಮಟ್ಟದ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯನ್ನು ದಲಿತ ಮುಖಂಡರು ಬಹಿಷ್ಕರಿಸಿದರು.

  ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಸಂಭಾಗಣದಲ್ಲಿ ತಹಶೀಲ್ದಾರ್ ಎಸ್ ಎಲ್ ನಯನ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಅಬಕಾರಿ,ಸಣ್ಣ ನೀರಾವರಿ, ಮತ್ತು ಅರಣ್ಯ ಹಾಗೂ ಅನೇಕ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದರು. ಮತ್ತು ಕೆಲವು ಇಲಾಖೆಯಲ್ಲಿ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಾಗಿರುವದಕ್ಕೆ ದಲಿತ ಮುಖಂಡರು ಅಸಮಾಧಾನ ಹೊರ ಹಾಕಿದರು.

  ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕಿರುವ ಸಭೆಯನ್ನು ಎರಡು ವರ್ಷ ಆದ ಮೇಲೆ ಸಭೆಯನ್ನು ಆಯೋಜನೆ ಮಾಡಿರುವುದು ಖಂಡನೀಯ. ಇದು ತಹಶೀಲ್ದಾರ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ದಲಿತ ವಿರೋಧಿಗಳ ಧೋರಣೆಯಾಗಿದೆ. ಹಿಂದಿನ ಸಭೆಯ ಅನುಪಾಲನೆ ವರದಿಯನ್ನೂ ಸರಿಯಾಗಿ ಮಾಡಿಲ್ಲವೆಂದು. ಕಳೆದ ಸಭೆಯಲ್ಲಿ ಗೈರು ಹಾಜರಾದ ಅಧಿಕಾರಗಳ ವಿರುದ್ಧ ಸೂಕ್ತ ಕ್ರಮವಹಿಸಿಲ್ಲ. ತಾಲ್ಲೂಕು ಆಡಳಿತ ಬೇಜವಾಬ್ದಾರಿಯಿಂದ ಸಭೆ ನಡೆಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ ಸಭೆಯನ್ನು ಬಹಿಷ್ಕರಿಸಿ ಹೊರ ನೆಡೆದರು.

  ನಂತರ ತಹಶೀಲ್ದಾರ್ ಎಸ್. ಎಲ್. ನಯನ ರವರು ಮಾತನಾಡಿ, ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಮುಂದಿನ ಸಭೆಯನ್ನು ಜುಲೈ 8 ರಂದು ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

  ಈ ಸಭೆಯಲ್ಲಿ ಡಿ ವೈ ಎಸ್ ಪಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ    ಎಂ. ಪಿ ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಕೇಶವಮೂರ್ತಿ ಹಾಗೂ ದಲಿತ ಮುಖಂಡರುಗಳು  ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.


ವರದಿ: ಹೊನ್ನೂರು ಪರಮೇಶ್ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ