ಯಳಂದೂರು ವೀರಶೈವ ಲಿಂಗಾಯತ ನೌಕರರ ಸಂಘದಿಂದ SSLC-PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕರೆಯೋಲೆ.



SSLC-PUC ಯಲ್ಲಿ 85% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ.

    ಯಳಂದೂರು :2025-26ನೇ ಸಾಲಿನ SSLC ಮತ್ತು ದ್ವಿತೀಯ PUC ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಗಳಿಸಿದ ವೀರಶೈವ ಲಿಂಗಾಯತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಯಳಂದೂರು ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘವು ಅರ್ಜಿ ಆಹ್ವಾನಿಸಿದೆ. ಈ ಕುರಿತು ಸಂಘದ ಅಧ್ಯಕ್ಷರು ಬಿ ನಂಜುಂಡಸ್ವಾಮಿ ದಿನಪತ್ರಿಕೆಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. 

ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘವು ದಿನಾಂಕ 09-08-2026 ರಂದು ಭಾನುವಾರ   ಸಂಘದ 22ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಯಳಂದೂರು ತಾಲ್ಲೋಕಿನ  ಕೆಸ್ತೂರು ಗ್ರಾಮದ ಶ್ರೀ ಪಟ್ಟದ ಮಠದಲ್ಲಿ ಯಳಂದೂರು ತಾಲ್ಲೂಕಿನ ಮಠಾಧೀಶರುಗಳ ದಿವ್ಯ ಸಮ್ಮುಖದಲ್ಲಿ ನಡೆಸಲಾಗುತ್ತಿದ್ದು ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಯಳಂದೂರು ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಘದ ಅಧ್ಯಕ್ಷರಾದ ಬಿ ನಂಜುಂಡಸ್ವಾಮಿ ಕಾರ್ಯದರ್ಶಿಗಳಾದ ಮಲ್ಲಣ್ಣ ಹಾಗೂ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-07-2026

ಅರ್ಹತೆಗಳು:

1. ವಿದ್ಯಾರ್ಥಿಯು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿರಬೇಕು.

2. 2025-26ನೇ ಸಾಲಿನ SSLC ಅಥವಾ ದ್ವಿತೀಯ PUC ಪರೀಕ್ಷೆಯಲ್ಲಿ ಶೇ.85% ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.

3. ಯಳಂದೂರು ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಆದ್ಯತೆ.


ಸಲ್ಲಿಸಬೇಕಾದ ದಾಖಲೆಗಳು:

ಶಾಲೆಯ ಹೆಸರು ಮತ್ತು ವಿಳಾಸ, ಅಂಕಪಟ್ಟಿ,ಜಾತಿ ಪ್ರಮಾಣ ಪತ್ರ, ಭಾವಚಿತ್ರ ಮತ್ತು ಪೂರ್ಣ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಕೂಡಲೇ ಸಂಪರ್ಕಿಸಿ:

1. ಅಧ್ಯಕ್ಷರು: ಬಿ ನಂಜುಂಡಸ್ವಾಮಿ (ಗಿರೀಶ್) ಅಂಬಳೆ - 7090872795

2. ಕಾರ್ಯದರ್ಶಿ: ಮಲ್ಲಣ್ಣ ಕೆಸ್ತೂರು - 6363815406


🙏🙏✍️ವಿನಂತಿ: ಯಳಂದೂರಿನ ಈ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಈ ಸುದ್ದಿಯನ್ನು ನಿಮ್ಮ WhatsApp Status ಹಾಗೂ Groups ಗಳಿಗೆ Share ಮಾಡಿ. ಧನ್ಯವಾದಗಳು - G1 NEWS Honnur

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ