ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜ್ಯುವೆಲರಿ ಮಾಲೀಕ ಅಹಮದಾಬಾದ್‌ನಲ್ಲಿ ಬಂಧನ. 100ಕ್ಕೂ ಹೆಚ್ಚು ಜನರಿಂದ ಚಿನ್ನ ಗಿರವಿ ಪಡೆದು ವಾಪಸ್ ನೀಡದೆ ಪರಾರಿಯಾಗಿದ್ದ ಆರೋಪಿ
ಹುಣಸೂರು ಪಟ್ಟಣದ ಬಜಾರ್ ರಸ್ತೆಯಲ್ಲಿರುವ ವಿನಾಯಕ ಜ್ಯುವೆಲರಿ ಮಾಲೀಕನಾಗಿದ್ದ ಆರೋಪಿ, ಹುಣಸೂರು ಭಾಗದ 100ಕ್ಕೂ ಹೆಚ್ಚು ಜನರಿಂದ ಚಿನ್ನಾಭರಣಗಳನ್ನು ಗಿರವಿ ಪಡೆದುಕೊಂಡಿದ್ದ ಎನ್ನಲಾಗಿದೆ. ಬಳಿಕ ಗ್ರಾಹಕರಿಗೆ ಚಿನ್ನಾಭರಣಗಳನ್ನು ವಾಪಸ್ ನೀಡದೆ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್ ಹಾಗೂ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದ ಎಂಬ ಆರೋಪ ಕೇಳಿಬಂದಿತ್ತು.
ಆರೋಪಿಯ ಪತ್ತೆಗೆ ಹುಣಸೂರು ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿದ್ದು, ಕೊನೆಗೂ ಗುಜರಾತ್‌ನ ಅಹಮದಾಬಾದ್‌ನಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿ ಜುಲೈ 10ರಂದು ಬಂಧಿಸಿದ್ದಾರೆ.
ಹುಣಸೂರು ಟೌನ್ ಪೊಲೀಸ್ ಠಾಣೆಯ ನೂತನ ಇನ್ಸ್‌ಪೆಕ್ಟರ್ ಶಿವಮಾದಯ್ಯ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ಟಿ.ಎಂ. ತಾಜುದ್ದೀನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಹೆಡ್ ಕಾನ್‌ಸ್ಟೆಬಲ್ ರಾಜರತ್ನಂ (ಎಚ್‌ಸಿ-166), ಅರುಣ್ (ಎಚ್‌ಸಿ-130) ಹಾಗೂ ಇರ್ಫಾನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬಂಧಿತ ಆರೋಪಿಯನ್ನು ಹುಣಸೂರಿಗೆ ಕರೆತಂದು ಕಾನೂನು ಕ್ರಮ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಮೂರು ವರ್ಷಗಳಿಂದ ವಿವಿಧ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ ಹುಣಸೂರು ಪಟ್ಟಣ ಠಾಣೆ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ