11ರಂದು ನಗರದಲ್ಲಿ ಎರಡನೇ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ
ಚಾಮರಾಜನಗರ, ಜುಲೈ 10 (ಕರ್ನಾಟಕ ವಾರ್ತೆ):- ರಾಷ್ಟ್ರೀಯ ಹಾಗೂ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಳ್ಳೇಗಾಲ ಗುಂಡ್ಲುಪೇಟೆ ಯಳಂದೂರು ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಚಾಮರಾಜನಗರ ಜಿಲ್ಲಾ ಬಾರ್ ಅಸೋಸಿಯೇಷನ್ ಸಹಯೋಗದಲ್ಲಿ ಎರಡನೇ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಜುಲೈ 11ರಂದು ಬೆಳಿಗ್ಗೆ 10 ಗಂಟೆಗೆ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಚಾಮರಾಜನಗರ ಆಡಳಿತಾತ್ಮಕ ನ್ಯಾಯಾಧೀಶರಾದ ಡಾ. ಕೆ. ಮನ್ಮಧ ರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಭಾವತಿ ಜಿ. ಅವರು ಅಧ್ಯಕ್ಷತೆ ವಹಿಸುವರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಜೆ. ಕೃಷ್ಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ