3-4 ವರ್ಷಗಳಿಂದ ಸ್ಥಗಿತ ಶುದ್ಧ ಕುಡಿಯುವ ನೀರಿನ ಘಟಕ ಕುಡಿಯುವ ನೀರಿಗಾಗಿ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ವರದಿ:ಮಣಿಕಂಠ ನಾಯಕ್ ಗೂಳಿಪುರ
3-4 ವರ್ಷಗಳಿಂದ ಸ್ಥಗಿತ ಶುದ್ಧ ಕುಡಿಯುವ ನೀರಿನ ಘಟಕ ಕುಡಿಯುವ ನೀರಿಗಾಗಿ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಗ್ರಾಮದ ನಾಯಕರ ಬಡಾವಣೆಯಲ್ಲಿರುವ ಕಲ್ಯಾಣಿ ಕೊಳದ ಪಕ್ಕ ಹಾಗೂ ವೇಣುಗೋಪಾಲಸ್ವಾಮಿ ದೇವಸ್ಥಾನದ ಸಮೀಪ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 3-4 ವರ್ಷಗಳಿಂದ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.
ಘಟಕದ ಸುತ್ತಮುತ್ತ ಕಳೆ ಬೆಳೆದು, ನಿರ್ವಹಣೆ ಇಲ್ಲದ ಕಾರಣ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಅದರ ಪ್ರಯೋಜನ ಜನರಿಗೆ ಸಿಗದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರಾದ ಚಂದ್ರಶೇಖರ ಎಚ್ಚರಿಕೆ ನೀಡಿದ್ದಾರೆ.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ