ಮೇಕೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳ ಮಂಜ @ ಕೋಳಿ ಮಂಜ ಬಂಧನ ಟೌನ್ ಪೊಲೀಸರ ಮಿಂಚಿನ ಕಾರ್ಯಾಚರಣೆ - ಕಳ್ಳತನದ ಬೈಕ್, ಮೇಕೆ ವಶ

 ವರದಿ:ಮಣಿಕಂಠ ನಾಯಕ್ ಗೂಳಿಪುರ 

ಮೇಕೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳ ಮಂಜ @ ಕೋಳಿ ಮಂಜ ಬಂಧನ ಟೌನ್ ಪೊಲೀಸರ ಮಿಂಚಿನ ಕಾರ್ಯಾಚರಣೆ - ಕಳ್ಳತನದ ಬೈಕ್, ಮೇಕೆ ವಶ

ಹುಣಸೂರು: ಪಟ್ಟಣ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೇಕೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿ ಮಂಜ @ ಕೋಳಿ ಮಂಜ ಎಂಬಾತನನ್ನು ಬಂಧಿಸಿದ್ದಾರೆ.

ದಿನಾಂಕ 13/06/2026 ರಂದು ಹುಣಸೂರು ಟೌನ್‌ನಲ್ಲಿ ಒಂದು ಮೇಕೆಯನ್ನು ಕಳ್ಳತನ ಮಾಡಿಕೊಂಡು ಮಾರುಕಟ್ಟೆಗೆ ಮಾರಾಟಕ್ಕೆ ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ಬಾತ್ಮೀದಾರರಿಂದ ಖಚಿತ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ನೂತನ ಇನ್ಸ್ಪೆಕ್ಟರ್ ಎಂ.ಶಿವಮಾದಯ್ಯ ರವರ ಮಾರ್ಗದರ್ಶನದಲ್ಲಿ, ನೂತನ ಪಿಎಸ್ಐ ಟಿ.ಎಂ. ತಾಜುದ್ದೀನ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಅರುಣ್ H.C 130, ಇರ್ಫಾನ್ PC 363, ದಿಲೀಪ್ PC 502, ಮಹೇಂದ್ರ PC 525, ಚಂದು PC 120 ರವರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಹುಣಸೂರು ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನದ ಒಂದು ಬೈಕ್ ಮತ್ತು ಒಂದು ಮೇಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮಂಜ @ ಕೋಳಿ ಮಂಜ ಮೇಲೆ ಈಗಾಗಲೇ ಬಿಳಿಕೆರೆ ಠಾಣೆಯಲ್ಲಿ 3 ಪ್ರಕರಣಗಳು, ಹುಣಸೂರು ಗ್ರಾಮಾಂತರ ಠಾಣೆಯಲ್ಲಿ 1 ಪ್ರಕರಣ, ಹುಣಸೂರು ಪಟ್ಟಣ ಠಾಣೆಯಲ್ಲಿ 2 ಪ್ರಕರಣಗಳು ಮತ್ತು ಪಿರಿಯಾಪಟ್ಟಣ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿವೆ. ಬೈಕ್ ಕಳ್ಳನ ಬಂಧನದಿಂದ ಹುಣಸೂರು ಜನತೆಗೆ ನೆಮ್ಮದಿ ಸಿಕ್ಕಂತಾಗಿದೆ.ಆಗಾಗಿ ಪೊಲೀಸ್ ಇಲಾಖೆಗೆ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ