ರೇಷ್ಮೆ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಆದಾಯ ಗಳಿಸಿ ರೇಣುಕೇಶ್ ಕರೆ.
ವರದಿ: ಗೂಳಿಪುರ ಮಣಿಕಂಠ ನಾಯಕ್
ರೇಷ್ಮೆ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಆದಾಯ ಗಳಿಸಿ ರೇಣುಕೇಶ್ ಕರೆ.
ಬೇಗೂರು: ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ (SVYM) ವಿವೇಕ ಗ್ರಾಮೀಣ ಜೀವನಧಾರ ಕೇಂದ್ರ, ಕುದೇರು ರೇಷ್ಮೆ ಕೃಷಿ ತರಬೇತಿ ಸಂಸ್ಥೆ, ರೇಷ್ಮೆ ಇಲಾಖೆ ಹಾಗೂ ಟೈಟನ್ ಕಂಪನಿ ಲಿಮಿಟೆಡ್ ಸಹಯೋಗದಲ್ಲಿ ರೇಷ್ಮೆ ಕೃಷಿ ಬೆಳೆಗಾರರಿಗಾಗಿ ಮೂರು ದಿನಗಳ ತರಬೇತಿ ಕಾರ್ಯಗಾರಕ್ಕೆ ಸೋಮವಾರ ದಂದು ಗುಂಡ್ಲುಪೇಟೆ ತಾಲೂಕಿನ ಬೇಗೂರು ಸರ್ಕಾರಿ ಐಟಿಐ ಕಾಲೇಜ್ ನಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಪಂಚಾಯಿತಿ ರೇಷ್ಮೆ ಇಲಾಖೆ ಉಪ ನಿರ್ದೇಶಕ ರೇಣುಕೇಶ್ ಉದ್ಘಾಟಿಸಿ ಮಾತನಾಡಿ ರೇಷ್ಮೆ ಕೃಷಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳು ಹಾಗೂ ಪ್ರೋತ್ಸಾಹ ದೊರೆಯುತ್ತಿದ್ದು ರೈತರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವೈಜ್ಞಾನಿಕ ಪದ್ಧತಿಯಲ್ಲಿ ರೇಷ್ಮೆ ಕೃಷಿ ಕೈಗೊಂಡರೆ ಉತ್ತಮ ಆದಾಯ ಗಳಿಸಬಹುದು ಎಂದು ತಿಳಿಸಿದರು.
ರೈತರಿಗೆ ಇಲಾಖೆಯಿಂದ ನಿರಂತರವಾಗಿ ತಾಂತ್ರಿಕ ಮಾರ್ಗದರ್ಶನ ನೀಡಲಾಗುತ್ತಿದ್ದು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಮತ್ತು ರೇಷ್ಮೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಇಂತಹ ತರಬೇತಿಗಳು ರೈತರ ಅಭಿವೃದ್ಧಿಗೆ ಪೂರಕವಾಗಿದೆ ಎಂದರು, ತರಬೇತಿಯಲ್ಲಿ ಭಾಗವಹಿಸಿರುವ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನ ವೈಜ್ಞಾನಿಕ ಬೇಸಾಯ ಪದ್ಧತಿ ಹಾಗೂ ರೇಷ್ಮೆ ಉತ್ಪಾದನೆ ಹೆಚ್ಚಿಸುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ಪಡೆದು ತಮ್ಮ ಕೃಷಿಯಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕುದೇರು ರೇಷ್ಮೆ ಕೃಷಿ ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಮಂಜುನಾಥ್ ಡಿ ಜಿ ಮಾತನಾಡಿ ಮೂರು ದಿನಗಳ ತರಬೇತಿಯಲ್ಲಿ ರೇಷ್ಮೆ ಕೃಷಿಯ ನೂತನ ತಂತ್ರಜ್ಞಾನ, ಉತ್ತಮ ತಳಿಗಳು,ಹಿಪ್ಪು ನೇರಳೆ ನಿರ್ವಹಣೆ, ರೋಗ ನಿಯಂತ್ರಣ ಹಾಗೂ ಸಮಗ್ರ ಬೇಸಾಯ ಪದ್ಧತಿಗಳ ಕುರಿತು ತಜ್ಞರಿಂದ ಪ್ರಾಯೋಗಿಕ ಹಾಗೂ ವೈಜ್ಞಾನಿಕ ಮಾಹಿತಿ ನೀಡಲಾಗುತ್ತಿದೆ ರೇಷ್ಮೆ ಕೃಷಿ ಪ್ರತಿ ತಿಂಗಳು ಆದಾಯ ತರುವ ಲಾಭದಾಯಕ ಕೃಷಿಯಾಗಿದ್ದು ರೈತರು ಇದರ ಸದುಪಯೋಗ ಪಡೆದು ಆರ್ಥಿಕವಾಗಿ ಸದೃಢ ರಾಗಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವಿವೇಕ ಗ್ರಾಮೀಣ ಜೀವನ ದಾರ ಕೇಂದ್ರದ ಹಿರಿಯ ವ್ಯವಸ್ಥಾಪಕ
ಪಿ ಡಿ ನಾಯಕ್ ಮಾತನಾಡಿ ರೇಷ್ಮೆ ಕೃಷಿಯಲ್ಲಿ ಹೆಚ್ಚಿನ ಲಾಭಗಳಿಸುವ ಅವಕಾಶವಿದ್ದು ರೈತರು ಇತರ ವೃತ್ತಿಯ ಮೂಲಕ ತಜ್ಞರೊಂದಿಗೆ ಸಂವಹನ ನಡೆಸಿದ ಸಂದೇಹಗಳನ್ನು ನಿವಾರಿಸಿಕೊಳ್ಳಬೇಕು ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಯಶಸ್ವಿ ರೇಷ್ಮೆ ಬೆಳೆಗಾರರಾಗಲು ಈ ತರಬೇತಿ ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆ ಆರ್ ಪೇಟೆ ರೇಷ್ಮೆ ತರಬೇತಿ ಸಂಸ್ಥೆ ಉಪ ನಿರ್ದೇಶಕ ಡಿ ಸೋಮಣ್ಣ ಗುಂಡ್ಲುಪೇಟೆ ತಾಲೂಕು ವಿಸ್ತರಣಾಧಿಕಾರಿ ಕುಮಾರ ಶಶಿ ಬಿ ಚಾಮರಾಜನಗರ ವಿಸ್ತರಣಾಧಿಕಾರಿ ಶಾಂತರಾಜು ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲೆ ಸಿ ಎ ಸುಚಿತ್ರ ಉಪ ಪ್ರಾಂಶುಪಾಲ ಪ್ರಸಾದ್ ವಿವೇಕ ಗ್ರಾಮೀಣ ಜೀವನದ ಕೇಂದ್ರದ ಚಾಮರಾಜನಗರ ತರಬೇತಿ ಸಂಯೋಜಕ ಅರ್ಜುನ್ ದೊರೆ ಎನ್ ಸಿಬ್ಬಂದಿಗಳಾದ ಪ್ರಕಾಶ್ ಜಯಕುಮಾರ್ ಚಿಕ್ಕನಾಯಕ ಪ್ರೀತಮ್ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ರೇಷ್ಮೆ ಬೆಳೆಗಾರರು ಉಪಸ್ಥಿತರಿದ್ದರು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ