ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಜೆಡಿಎಸ್ ನಿಂದ ಶ್ರದ್ಧಾಂಜಲಿ.
ಯಳಂದೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿ ಯಳಂದೂರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಬಿ ಪುಟ್ಟಸ್ವಾಮಿ ಅಭಿಮಾನಿಗಳ ಬಳಗ ಹಾಗೂ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು ಸಭೆಯಲ್ಲಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಎರಡು ನಿಮಿಷಗಳ ಮೌನಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಬಳಿಕ ಮಾತನಾಡಿದ ಮುಖಂಡರಾದ ಸಿದ್ದರಾಜನಾಯಕ ಟೌನ್ ಘಟಕದ ಅಧ್ಯಕ್ಷ ಚಂದ್ರು ಹಾಗೂ ಮದ್ದೂರು ನಿಂಗರಾಜಪ್ಪ ಚೆನ್ನಮ್ಮ ರವರು ಸರಳತೆ, ಸೌಜನ್ಯ ಮತ್ತು ಕುಟುಂಬ ಮೌಲ್ಯಗಳಿಗೆ ಹೆಸರುವಾಸಿಯಾಗಿದ್ದು ಅವರ ಜೀವನ ಎಲ್ಲರಿಗೂ ಮಾದರಿಯಾಗಿದೆ ಎಂದು ಸ್ಮರಿಸಿದರು ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದ್ದು ದೇವೇಗೌಡರ ಕುಟುಂಬದ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ ಎಂದು ಸಂತಾಪ ಸೂಚಿಸಿದರು,
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಕೆಸ್ತೂರು ಆನಂದ್, ಪ್ರಧಾನ ಕಾರ್ಯದರ್ಶಿ ಅಂಬಳೆ ರವೀಶ್, ಖಜಾಂಚಿ ವೈ ಕೆ ಮೋಳೆ ಸೋಮಣ್ಣ, ಗುರುಲಿಂಗಯ್ಯ, ಜವರಶೆಟ್ಟಿ, ಯರಿಯೂರು ಜಯಣ್ಣ, ಒಡಗೆರೆ ಸುಂದರಣ್ಣ, ಯೋಗೇಂದ್ರ ಲಿಂಗರಾಜು, ಕುದೇರು ಶಂಕರ್, ಉಪ್ಪಿನ ಮೊಳೆ ಮಹೇಶ್ ಸೇರಿದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ