ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ.
ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ
ಸಂತೇಮರಹಳ್ಳಿ : ಇಲ್ಲಿನ ವೃತ್ತದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಬಸವಣ್ಣ ಮಾತನಾಡಿ ರಾಜ್ಯ ಸರ್ಕಾರ ಕದ್ದು ಮುಚ್ಚಿ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಟ್ಟು ರೈತರ ಬಾಯಿಗೆ ಮಣ್ಣು ಹಾಕುವ ಕೆಲಸಕ್ಕೆ ಮಾಡುವುದು ಖಂಡನೀಯ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರು ಸಂಕಷ್ಟಕ್ಕೆ ಸಿಲುಕಿದರು ತಮಿಳು ನಾಡಿಗೆ ನೀರು ಹರಿಸುವುದನ್ನು ಮೊದಲು ನಿಲ್ಲಿಸಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತರು ಟೈರ್ ಗೆ ಬೆಂಕಿ ಹಚ್ಚುವ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಘಂಟೆ ರವಾನಿಸಿದ್ದಾರೆ.
ಕಾವುದವಾಡಿ ನಾಗೇಶ್ ಮಾತನಾಡಿ ರಾಜ್ಯಕ್ಕೆ ಭರಬಂದು ಬಾವಿಗಳಲ್ಲಿ ನೀರಿಲ್ಲದೆ ಕೆರೆಕಟ್ಟೆಗಳು ಒಣಗುತ್ತಿದ್ದರು ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ನಮ್ಮ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ, ಇನ್ನೂ ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಈ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ ಎಂದು ಹೇಳಿದರು
ಈ ಸಂದರ್ಭದಲ್ಲಿ ವೃತ್ತ ನೀರಿಕ್ಷಕರಾದ ಸಾಗರ್ ನೇತೃತ್ವದಲ್ಲಿ ಆರಕ್ಷಕರ ತಂಡ ರೈತರು ಟೈರ್ ಗೆ ಹಚ್ಚಿದ ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ತಾಲ್ಲೂಕು ಅಧ್ಯಕ್ಷ ಮಹದೇವಸ್ವಾಮಿ ಹೆಗ್ಗವಾಡಿಪುರ, ಶ್ರೀಕಂಠ ಮೂರ್ತಿ ಕಾವುದವಾಡಿ, ನಾಗೇಶ್ ಕಾವುದವಾಡಿ, ಕುಮಾರಸ್ವಾಮಿ,ಪುಟ್ಟಣ್ಣ, ನಾಗೇಶ್, ರಾಜಶೇಖರ್ ಮೂರ್ತಿ ಮಹಂತಾಳಪುರ, ಸಾಹುಕಾರ್ ಮಹೇಂದ್ರ ಹೊನ್ನೂರು, ಮಹದೇವಸ್ವಾಮಿ ಹೊನ್ನೂರು, ಸತೀಶ್ ಹೊನ್ನೂರು, ಸಿದ್ದಶೆಟ್ಟಿ ಹೊನ್ನೂರು, ಮಹದೇವ ಮರಿಯಾಲ, ರವೀಶ್,ಮಹದೇವಸ್ವಾಮಿ, ಸಿದ್ದೇಶ, ಮಹೇಶ್,ರಾಜೇಂದ್ರ ಮೂರ್ತಿ, ನಿಂಗರಾಜು, ಪ್ರಭುಸ್ವಾಮಿ ವಿಜಯ್, ಪ್ರಭು ಇನ್ನು ಹಲವಾರು ರೈತ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ