ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ
ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾದೀಶ ಈಶ್ವರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಉದ್ಘಾಟನಾ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಗಮನ ಹರಿಸಬೇಕು. ಹದಿನೆಂಟು ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡಬಾರದು. ಗಂಡು ಮಕ್ಕಳಿಗೆ 21 ವರ್ಷದ ಒಳಗೆ ವಿವಾಹ ಮಾಡಬಾರದು ಎಂದರು.
ಬಾಲ್ಯ ವಿವಾಹ, ವೇಶ್ಯಾವಾಟಿಕೆ, ಅಂಗಾಂಗಗಳ ಕಳ್ಳಸಾಗಾಣೆ, ಬಲವಂತದ ದುಡಿಮೆ, ಹಾಗೂ ಲೈಂಗಿಕ ಶೋಷಣೆಯಂತಹ ಕೃತ್ಯಗಳು ಮಾನವ ಕಳ್ಳ ಸಾಗಾಣಿಕೆಯ ರೂಪಗಳಾಗಿವೆ. ಇವೆಲ್ಲವನ್ನೂ ತಡೆಗಟ್ಟಲು ಭಾರತೀಯ ನ್ಯಾಯ ಸಂಹಿತೆ, ಮಕ್ಕಳ ರಕ್ಷಣಾ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಸೇರಿದಂತೆ ಹಲವು ಕಾನೂನುಗಳು ಜಾರಿಯಲ್ಲಿವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಗುಂಡ್ಲುಪೇಟೆ ಎರಡು ರಾಜ್ಯಗಳ ಗಡಿ ಭಾಗವಾದ್ದರಿಂದ ಉದ್ಯೋಗದ ಆಮಿಷವನ್ನು ಒಡ್ಡಿ ಮಾನವ ಸಾಗಾಣಿಕೆಯನ್ನು ಮಾಡುತ್ತಾರೆ. ಆದ್ದರಿಂದ ತಾಲೂಕಿನ ಜನತೆ ಎಚ್ಚರಿಕೆ ವಹಿಸಬೇಕು. 112 ಹಾಗೂ 1098 ನಂಬರ್ ಸಹಾಯವಾಣಿಗೆ ದೂರನ್ನು ಸಲ್ಲಿಸಬಹುದು. ಮಾನವ ಕಳ್ಳ ಸಾಗಾಣಿಕೆ ಎಂಬುದು ಪ್ರಪಂಚದಾದ್ಯಂತ ನಡೆಯುತ್ತಿದೆ ಇದನ್ನು ತಡೆಗಟ್ಟುವ ಕಾರ್ಯದಲ್ಲಿ ಪ್ರತಿಯೊಬ್ಬರ ಪಾತ್ರವೂ ಇದೆ. ಹೆಣ್ಣು ಸುತ್ತೂರು ಶ್ರೀಗಳ ಕೃಪಾಶೀರ್ವಾದದಿಂದ ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣ ದೊರೆಯುತ್ತಿರುವುದು ನಾವು ನೀವೆಲ್ಲರೂ ಹೆಮ್ಮೆ ಪಡುವ ವಿಷಯವಾಗಿದೆ ಎಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ, ಮಹಿಳೆಯರಿಗೆ, ಮಕ್ಕಳಿಗೆ ಕೆಲಸ ಕೊಡಿಸುತ್ತೇವೆ, ಹಣ ಹೆಚ್ಚಳ ಮಾಡಿಕೊಡುತ್ತೇವೆ ಎಂದು ಹೇಳಿ ಮಾನವ ಕಳ್ಳ ಸಾಗಾಣಿಕೆಯನ್ನು ಉದ್ಯಮವನ್ನಾಗಿ ಪರಿವರ್ತಿಸಿಕೊಂಡಿದ್ದಾರೆ. ಯುವಕರು, ಯುವತಿಯರು ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ತುಂಬಾ ಎಚ್ಚರ ವಹಿಸಬೇಕು. ನಿರುದ್ಯೋಗದ ಸಮಸ್ಯೆಯಿಂದ ದುಡ್ಡಿನ ಆಸೆಯಿಂದ ಕೆಟ್ಟ ಕೆಲಸಗಳಿಗೆ ಇಳಿಯುತ್ತಿದ್ದಾರೆ ಬಡತನ, ಅನಕ್ಷರತೆ, ನಿರುದ್ಯೋಗ ಇವೆಲ್ಲದಕ್ಕೂ ಮೂಲ ಮಾನವ ಕಳ್ಳ ಸಾಗಾಣಿಕೆಯಾಗಿದೆ. ಮಾನವನನ್ನು ಒಂದು ಸ್ಥಾನದಿಂದ ಮತ್ತೊಂದು ಸ್ಥಾನಕ್ಕೆ ಹಣಕ್ಕಾಗಿ ಸಾಗಾಣಿಕೆ ಮಾಡುತ್ತಿದ್ದಾರೆ. ಬದುಕು ಕಟ್ಟಿಕೊಳ್ಳುವ ಕುರಿತು ಪ್ರತಿಯೊಬ್ಬರು ಯೋಚಿಸಬೇಕಾಗಿದೆ ಎಂದರು.ಕಾಲೇಜಿನ ಪ್ರಾಂಶುಪಾಲೆ ಪಿ. ಮಹದೇವಮ್ಮ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಮಂಜುಳ ಬಿ, ಬಾಲ ನ್ಯಾಯ ಮಂಡಳಿ ಸದಸ್ಯೆ ಸರಸ್ವತಿ, ಸಿಡಿಪಿಓ ಹೇಮಾವತಿ, ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಲ್ಲಪ್ಪ, ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ