ಮಂಟೇಸ್ವಾಮಿ ಹಾಗೂ ಸಿದ್ದಪ್ಪಾಜಿ ದೇವಾಲಯದ ಪ್ರತಿಷ್ಠಾಪನೆ ಕಾರ್ಯಕ್ರಮ

ವರದಿ: ಗುರುರಾಜ್ ತೆಳ್ಳನೂರು 

ಹೆಗ್ಗವಾಡಿಪುರ ಗ್ರಾಮದ ಮಂಟೇಸ್ವಾಮಿ ಹಾಗೂ ಸಿದ್ದಪ್ಪಾಜಿ ದೇವಾಲಯದ ಪ್ರತಿಷ್ಠಾಪನೆ ಕಾರ್ಯಕ್ರಮ 

ಸಂತೇಮರಹಳ್ಳಿ : ಸಮೀಪದ ಹೆಗ್ಗವಾಡಿಪುರ ಗ್ರಾಮದಲ್ಲಿ ಶ್ರೀ ಮಂಟೇಸ್ವಾಮಿ ಹಾಗೂ ಸಿದ್ದಪ್ಪಾಜಿ ನೂತನ ದೇವಾಲಯದ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ರಂಗೋಲಿ ಇಟ್ಟು ಹಸಿರು ತೋರಣಗಳಿಂದ ಶೃಂಗಾರ ಮಾಡಿ ವಿದ್ಯುತ್ ದೀಪಗಳಿಂದ ಅಲಂಕೃತ ಮಾಡಲಾಗಿತ್ತು ಹಾಗೂ ಬೆಳಿಗ್ಗೆಯಿಂದ ಪುಷ್ಪಾರ್ಜನೆ ಕುಂಕುಮಾರ್ಚನೆ ಸೇರಿದಂತೆ ಹಲವಾರು ಪೂಜೆಗಳನ್ನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ಶಿವಕುಮಾರ್ ಮಾತನಾಡಿ ಬಹು ವರ್ಷಗಳಿಂದ ಮಂಟೇಸ್ವಾಮಿ, ಸಿದ್ದಪ್ಪಾಜಿ ದೇವಾಲಯದ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರ ಆಶಯವಿತ್ತು. ಹಾಗಾಗಿ ದೇವಾಲಯದ ಪ್ರತಿಷ್ಠಾಪನೆಗೆ ಗ್ರಾಮಸ್ಥರು ಹಾಗೂ ಭಕ್ತಾದಿಗಳ ಸಹಕಾರದಿಂದ ನಿರ್ಮಾಣ ಮಾಡಲಾಗಿದೆ ಎಂದರು.

ದೇವರ ದರ್ಶನಕ್ಕೆ ಅಕ್ಕಪಕ್ಕದ ಗ್ರಾಮಗಳಿಂದ ಐದು ಸಾವಿರಕ್ಕಿಂತ ಹೆಚ್ಚು ಭಕ್ತಾದಿಗಳು ಬಂದು ದೇವರ ದರ್ಶನ ಪಡೆದರು, ಈ ಸಂದರ್ಭದಲ್ಲಿ ಬಂದಿರುವ ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಗಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ