ಗೂಳಿಪುರ ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಅರಿವು ಮಾಜಿ ಸಚಿವ ಎನ್ ಮಹೇಶ್ ಭಾಗಿ
ವರದಿ:ಗೂಳಿಪುರ ಮಣಿಕಂಠನಾಯಕ
ಗೂಳಿಪುರ ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಅರಿವು ಮಾಜಿ ಸಚಿವ ಎನ್ ಮಹೇಶ್ ಭಾಗಿಯಳಂದೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೂಳಿಪುರ ಗ್ರಾಮದಲ್ಲಿ ನಡೆದ ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎನ್ ಮಹೇಶ್ ಭಾಗವಹಿಸಿ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಎಸ್‌ಐಆರ್ ಪ್ರಕ್ರಿಯೆಯ ಮಹತ್ವ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವ ವಿಧಾನ ಕುರಿತು ಮಾಹಿತಿ ನೀಡಲಾಯಿತು. ಅರ್ಹ ಮತದಾರರು ತಪ್ಪದೇ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ನೋಂದಣಿಯಾಗುವಂತೆ ಕ್ರಮವಹಿಸಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಬಿಜೆಪಿ ಮುಖಂಡರು ಮೋಹನ್, ಮಹದೇವಸ್ವಾಮಿ,ಉಮೇಶ್, ಗಜೇಂದ್ರ, ಮತಾಪ್ (ಮಧು), ಚಂದ್ರು, ವೆಂಕಟೇಶ್, ಶೇಖ, ಬಿ ಎಲ್ ಓ ಮಂಜುಳ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಸಲ್ಲಿಸಿದರು. ಬಳಿಕ ಗ್ರಾಮಸ್ಥರೊಂದಿಗೆ ಚರ್ಚಿಸಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಕರೆ ನೀಡಲಾಯಿತು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ