ಡಿವೈಎಸ್‌ಪಿ ಸ್ನೇಹರಾಜ್ ಎಸ್ ಬಿ ಸಿಬ್ಬಂದಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಮಾರ್ಗದರ್ಶನ.

ವರದಿ: ಮಣಿಕಂಠ ನಾಯಕ್ ಗೂಳಿಪುರ 

ಎಸ್‌ಬಿ ಸಿಬ್ಬಂದಿಗೆ ಡಿವೈಎಸ್‌ಪಿ ಮಾರ್ಗದರ್ಶನ: ಕಾನೂನು ಸುವ್ಯವಸ್ಥೆ ಕಾಪಾಡಲು ಪರಿಣಾಮಕಾರಿ ಮಾಹಿತಿ ಸಂಗ್ರಹಕ್ಕೆ ಸೂಚನೆ

ಚಾಮರಾಜನಗರ ಜು.3: ಉಪವಿಭಾಗದ ಡಿವೈಎಸ್‌ಪಿ ಅವರು ಇಂದು ತಮ್ಮ ವ್ಯಾಪ್ತಿಗೆ ಬರುವ ಪೊಲೀಸ್ ಠಾಣೆಗಳ ವಿಶೇಷ ಶಾಖೆ (SB) ಸಿಬ್ಬಂದಿಯೊಂದಿಗೆ ಸಭೆ ನಡೆಸಿ, ಇಲಾಖೆಯ ಕಾರ್ಯವೈಖರಿ ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಎಸ್‌ಬಿ ವಿಭಾಗದ ವಿವಿಧ ರಿಜಿಸ್ಟರ್‌ಗಳನ್ನು ಪರಿಶೀಲಿಸಿದ ಡಿವೈಎಸ್‌ಪಿ ಸ್ನೇಹಾರಾಜ್ ಅವರು, ಅವುಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ಅಲ್ಲದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಬೆಳವಣಿಗೆಗಳ ಬಗ್ಗೆ ಪರಿಣಾಮಕಾರಿಯಾಗಿ ಗುಪ್ತ ಮಾಹಿತಿಯನ್ನು ಸಂಗ್ರಹಿಸಿ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಿ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಎಸ್‌ಬಿ ಸಿಬ್ಬಂದಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ