ಭಾರತ್ ಭೀಮ್ ಸೇನೆ ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಆನಂದ್ ಎಂ ಆಯ್ಕೆ
ಭಾರತ್ ಭೀಮ್ ಸೇನೆ ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಆನಂದ್ ಎಂ ಆಯ್ಕೆ
ಸಂತೇಮರಹಳ್ಳಿ:ಸಮಾಜದ ದೀನದಲಿತರು, ಹಿಂದುಳಿದವರು ಹಾಗೂ ನೊಂದವರ ಪರ ಧ್ವನಿ ಎತ್ತುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಭಾರತ್ ಭೀಮ್ ಸೇನೆ ಸಂಘಟನೆಯ ಚಾಮರಾಜನಗರ ಜಿಲ್ಲಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಆನಂದ್ ಎಂ ಅವರನ್ನು ಆಯ್ಕೆ ಮಾಡಲಾಯಿತು.
ಸಂತೇಮರಹಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ರಾಜ್ಯಮಟ್ಟದ ಭಾರತ್ ಭೀಮ್ ಸೇನೆ ಸಂಘದ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ದಿನೇಶ್ ಅವರ ಅಧ್ಯಕ್ಷತೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥಾಪಕ ದಿನೇಶ್ ಅವರು, "ಭಾರತ್ ಭೀಮ್ ಸೇನೆ ರಾಜ್ಯದ ಪ್ರಪ್ರಥಮ ಸಂಘಟನೆಯಾಗಿದ್ದು, ಎಲ್ಲಾ ವರ್ಗಗಳ ಸದಸ್ಯರನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ. ಈ ಸಂಘಟನೆಯು ಕೇವಲ ಒಂದು ಜಾತಿಗೆ ಸೀಮಿತವಾಗದೆ ರಾಜ್ಯಾದ್ಯಂತ ಎಲ್ಲಾ ವರ್ಗಗಳ ಜನರನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ ನೊಂದವರ ಮತ್ತು ಹಿಂದುಳಿದವರ ಪರವಾಗಿ ನಿಲ್ಲುವ ಏಕೈಕ ಸಂಘಟನೆಯಾಗಿದೆ" ಎಂದು ತಿಳಿಸಿದರು.
ಇಡೀ ರಾಜ್ಯದ್ಯಂತ ಈ ಸಂಘಟನೆಯು 20,830 ಸದಸ್ಯರನ್ನು ಹೊಂದಿದೆ. ಅನಾಥಾಶ್ರಮ, ವೃದ್ಧಾಶ್ರಮ ಸೇರಿದಂತೆ ಸಮಾಜದ ದುರ್ಬಲ ವರ್ಗಗಳಿಗೆ ಸಹಾಯ ಮಾಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ಆದರ್ಶಗಳ ಹಾದಿಯಲ್ಲಿ ನಾವು ಸಾಗುತ್ತೇವೆ ಎಂದು ಅವರು ಹೇಳಿದರು.
ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷರಾದ ಎನ್. ರಿಚ್ ಮಹದೇವಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಾತಿವಾದದ ಭೀತಿಯಲ್ಲಿ ಜನರು ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಹೇಳುವುದು ಒಂದು ಮಾಡುವುದು ಇನ್ನೊಂದು ಎಂಬ ಸ್ಥಿತಿ ಬಂದಿದೆ. ಪ್ರತಿಯೊಂದು ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸುತ್ತಿವೆ. ದೇಶದಲ್ಲಿ ಸಾಮಾಜಿಕ ಸಂಘಟನೆಗಳು ಸದೃಢವಾಗಿರಬೇಕು. ರಾಜಕಾರಣಿಗಳು ಸಂಘಟನೆಗಳನ್ನು ನಿಷ್ಕ್ರಿಯಗೊಳಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಮೂಲಕವೇ ದೇಶ ಉದ್ಧಾರವಾಗಬೇಕು ಎಂದು ಅಭಿಪ್ರಾಯಪಟ್ಟರು.
ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷ ಆನಂದ್ ಎಂ ಮಾತನಾಡಿ, ಜಿಲ್ಲೆಯಲ್ಲಿ ತಳಮಟ್ಟದಿಂದ ಸಂಘಟನೆಯನ್ನು ಬಲಪಡಿಸಲಾಗುವುದು. ಜಿಲ್ಲೆಯ ಪ್ರತಿಯೊಂದು ಗ್ರಾಮ ಮತ್ತು ತಾಲ್ಲೂಕು ಮಟ್ಟದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ರಾಜ್ಯದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಸಂಘಟನೆಯಾಗಿ ಮಾಡುವ ಗುರಿ ಹೊಂದಿದ್ದೇನೆ. ಜಿಲ್ಲೆಯ ಬಡವರು, ಹಿಂದುಳಿದವರು ಮತ್ತು ದೀನದಲಿತರ ಪರವಾಗಿ ನಿಂತು ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರ
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷೆ ಮಹದೇವಮ್ಮ, ಮೈಸೂರು ಜಿಲ್ಲಾಧ್ಯಕ್ಷ ಅಶ್ವಥ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶವಂತ್, ಜಿಲ್ಲಾ ಗ್ಯಾರಂಟಿ ಯೋಜನೆ ಸದಸ್ಯೆ ಭಾಗ್ಯಮ್ಮ, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲು, ಮುಖಂಡರಾದ ಉಮ್ಮತ್ತೂರು ಸೋಮಣ್ಣ, ಶಿವಣ್ಣ, ರುದ್ರಯ್ಯ, ಪುಟಬುದ್ಧಿ, ಚಿಕ್ಕಮಲ್ಲಯ್ಯ, ಪ್ರಕಾಶ್ ಹೆಗ್ಗವಾಡಿಪುರ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಆನಂದ್ ಎಂ ಅವರಿಗೆ G1 NEWS Honnur ವತಿಯಿಂದ ಅಭಿನಂದನೆಗಳು 💐
ನಮ್ಮ ಸ್ಥಳೀಯ ಸುದ್ದಿಗಳಿಗಾಗಿ G1 NEWS Honnur ಗೆ Follow ಮಾಡಿ 🙏ನಿಮ್ಮ ಸುತ್ತಮುತ್ತಲಿನ ಕಾರ್ಯಕ್ರಮದ ಮಾಹಿತಿ WhatsApp ಮಾಡಿ: 99644 81518


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ