ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ ನ್ಯಾಯಾಧೀಶರಾದ ಈಶ್ವರ್ ಕರೆ

 

ಚಾಮರಾಜನಗರ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಬುಧವಾರ ದಂದು ಮರಿಯಾಲದ ಶ್ರೀಮುರುಘರಾಜೇಂದ್ರ ಸ್ವಾಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳಲ್ಲಿ ಕಾನೂನು ಅರಿವು ಮತ್ತು ಕ್ರೀಡಾ ಮಹತ್ವ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಯುತ ಈಶ್ವರ್ ರವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಅಪಹರಣ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಸುದೀರ್ಘ ಮಾಹಿತಿ ನೀಡಿದರು. ಜೊತೆಗೆ ಅವುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ತಿಳಿಸಿದರು.

18 ವರ್ಷದೊಳಗಿನ ಮಕ್ಕಳು ಚಾಲನಾ ಪರವಾನಿಗೆ ಇಲ್ಲದೆ ಮೋಟಾರ್ ಬೈಕ್ ಚಾಲನೆ ಮಾಡುವುದು ಅಪರಾಧ ಎಂದು ಎಚ್ಚರಿಸಿದರು. ಲೈಂಗಿಕ ಶೋಷಣೆಯ ವಿರುದ್ಧವೂ ಅರಿವು ಮೂಡಿಸಿದರು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯವಂತ ಜೀವನ ರೂಢಿಸಿಕೊಳ್ಳಬಹುದು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪಿ. ಮಹಾದೇವಸ್ವಾಮಿ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ರಾಷ್ಟ್ರೀಯ ಫುಟ್ಬಾಲ್ ತರಬೇತುದಾರ ಯೋನ್ಹ ಜೋಸೆಫ್  ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ದೈಹಿಕ ಶಿಕ್ಷಕ ಜೋಸೆಫ್ ಎನ್ ರವರು ಭಾಗವಹಿಸಿದ್ದರು.

ಪ್ರಾಸ್ತಾವಿಕ ನುಡಿಯನ್ನು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಎಲ್. ಸುರೇಶ್ ರವರು ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕ ಕೆ ಸಿ ಮಹೇಂದ್ರ ಸ್ವಾಗತವನ್ನು ಬಿ. ನಂಜುಂಡಸ್ವಾಮಿ ವಂದನಾರ್ಪಣೆಯನ್ನು ಕು. ಮಾನಸ ರವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.


ನಿಮ್ಮ ಧ್ವನಿ ನಮ್ಮ ಸುದ್ದಿ 📢

G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ