ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಾಮರಾಜನಗರ ಜಿಲ್ಲಾ ಘಟಕದ ಸಭೆ
ವರದಿ:ಹೊನ್ನೂರು ಪುಟ್ಟಸ್ವಾಮಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಾಮರಾಜನಗರ ಜಿಲ್ಲಾ ಘಟಕದ ಸಭೆ.
ಸಂತೇಮರಹಳ್ಳಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಾಮರಾಜನಗರ ಜಿಲ್ಲಾ ಘಟಕದ ಸಭೆಯು ಶನಿವಾರ ಸಂತೇಮರಹಳ್ಳಿ ಗ್ರಾಮದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ನಡೆಯಿತು.
ಜಿಲ್ಲಾ ಅಧ್ಯಕ್ಷ ಪ್ರಕಾಶ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಪತ್ರಕರ್ತರ ಸಂಘಟನೆ ಹಾಗೂ ಪತ್ರಿಕಾ ರಂಗದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಸದಸ್ಯತ್ವ ನೋಂದಣಿ ಜಿಲ್ಲೆಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವ ಮೂಲಕ ಸಂಘಟನೆಯನ್ನು ಬಲಪಡಿಸಲು ತೀರ್ಮಾನಿಸಲಾಯಿತು.
ಮಾಸಿಕ ಸಭೆ ಪ್ರತಿ ತಿಂಗಳ ಎರಡನೇ ಶನಿವಾರ ತಾಲೂಕು ಕೇಂದ್ರದಲ್ಲಿ ಸಭೆ ಆಯೋಜಿಸಿ ಪತ್ರಕರ್ತರ ಸಮಸ್ಯೆ ಹಾಗೂ ಸಂಘಟನೆಯ ವಿಚಾರಗಳ ಕುರಿತು ಚರ್ಚಿಸಲು ನಿರ್ಧರಿಸಲಾಯಿತು.
ಸದಸ್ಯತ್ವ ಶುಲ್ಕ ಈ ತಿಂಗಳ ಒಳಗೆ ಎಲ್ಲಾ ಸದಸ್ಯರು 1500 ರೂ. ಸದಸ್ಯತ್ವ ಶುಲ್ಕವನ್ನು ಅಧ್ಯಕ್ಷರಿಗೆ ಪಾವತಿಸಬೇಕು ಎಂದು ತಿಳಿಸಲಾಯಿತು.
ರಾಜ್ಯ ಮಟ್ಟದ ಕಾರ್ಯಕ್ರಮ ಇದೇ ತಿಂಗಳು ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಬೇಕು ಎಂದು ತೀರ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷರಾದ ಗವಿಸ್ವಾಮಿ, ಪ್ರದೀಪ್,ಕಾರ್ಯದರ್ಶಿ ಹೊಸಮಲಗಿ ಶಿವಮಲ್ಲು, ಶಿವರಾಜ್ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
ಪತ್ರಕರ್ತರ ಹಿತರಕ್ಷಣೆ ಹಾಗೂ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಇಂತಹ ಸಭೆಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾ ಅಧ್ಯಕ್ಷ ಪ್ರಕಾಶ್ ತಿಳಿಸಿದರು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 99644 81518Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ