ಹೆಚ್ ಕೆ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ.

ಹೆಚ್ ಕೆ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ.

ಕೊಳ್ಳೇಗಾಲ, ಜುಲೈ 17: ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹೆಚ್.ಕೆ. ಟ್ರಸ್ಟ್ ವತಿಯಿಂದ ಕೊಳ್ಳೇಗಾಲ ತಾಲ್ಲೂಕು ಮತ್ತು ಹನೂರು ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶುಕ್ರವಾರ ಸಾಂಕೇತಿಕವಾಗಿ ದೊಡ್ಡಿಂದುವಾಡಿ ಮತ್ತು ಮಂಗಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಿದ ಹೆಚ್.ಕೆ ಟ್ರಸ್ಟ್ ಕಾರ್ಯದರ್ಶಿ ರವರಾದ ಪ್ರೇಮಲತಾ ಕ್ರಷ್ಣ ಸ್ವಾಮಿ ರವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ಉದ್ದೇಶದಿಂದ ಪ್ರತಿವರ್ಷ ಶಿಕ್ಷಣ ಸಂಬಂಧಿತ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಲಭ್ಯವಾಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕರು ಹೆಚ್.ಕೆ. ಟ್ರಸ್ಟ್‌ನ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿ, ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಮೂಲಕ ಶಿಕ್ಷಣದ ಮೇಲಿನ ಆಸಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಕಾರ್ಯವನ್ನು ಟ್ರಸ್ಟ್ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಸಂಯೋಜಕರಾದ ಶ್ರೀ ರಾಜೇಶ್ ರವರು, ವಿಶ್ವ ಚೇತನ ಕಾಲೇಜಿನ ಉಪನ್ಯಾಸಕರಾದ ಶ್ಯಾಮ್  ಹಾಗೂ ಭೂಗೋಳ ಶಾಸ್ತ್ರ ಉಪನ್ಯಾಸಕರಾದ ಚೇತನ್ , ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ 

ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಗ್ರಾಮಸ್ಥರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.


ನಿಮ್ಮ ಧ್ವನಿ ನಮ್ಮ ಸುದ್ದಿ 📢

G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ