ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕೂ ವಿಭಾಗದ ನೂತನ ಅಧ್ಯಕ್ಷರಾಗಿ ಡಿ ಕೆಂಪಯ್ಯ ಆಯ್ಕೆ.

ವರದಿ:G1 ನ್ಯೂಸ್ 


ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕೂ ವಿಭಾಗದ ನೂತನ ಅಧ್ಯಕ್ಷರಾಗಿ ಡಿ ಕೆಂಪಯ್ಯ ಆಯ್ಕೆ. 

ಕೊಳ್ಳೇಗಾಲ 21: ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಮಾನ್ಯ ಅಧ್ಯಕ್ಷರಾದ ಡಾಕ್ಟರ್ ಅಭಿಷೇಕ್ ಮನು ಸಿಂಘ್ವಿ ರವರ ಆದೇಶದ ಮೇರೆಗೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ ಕೆ ಹರಿಪ್ರಸಾದ್ ರವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೂತನ ಅಧ್ಯಕ್ಷರಾಗಿ ಕೊಳ್ಳೇಗಾಲ ತಾಲೂಕು ವಕೀಲರ ಸಂಘದ ಕಾರ್ಯದರ್ಶಿಗಳಾದ ಸಿಲ್ಕಲ್ಪುರ ಗ್ರಾಮದ ಶ್ರೀ ಡಿ ಕೆಂಪಯ್ಯ ಅವರನ್ನು ನೇಮಕ ಮಾಡಲಾಯಿತು.

ಈ ನೇಮಕಾತಿಯು ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ನೀರಿಕ್ಷೆ ಮೂಡಿಸಿದ್ದು ಕಾನೂನು ಹಕ್ಕುಗಳು ಹಾಗೂ ಮಾಹಿತಿ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕರ ಹಕ್ಕುಗಳ ರಕ್ಷಣೆಗೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದರು.

ನಂತರ ಮಾತನಾಡಿ ಶ್ರೀ ಡಿ ಕೆಂಪಯ್ಯ ರವರು ಮಾತನಾಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವುದು ಸಂಘಟನೆಯನ್ನು ಮಟ್ಟದಲ್ಲಿ ಇನ್ನಷ್ಟು ಸದೃಢಗೊಳಿಸುವುದು ಹಾಗೂ ಜನಸೇವೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ ಅವರ ನೇಮಕಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ  ಶುಭಾಶಯಗಳನ್ನು ಕೋರಿದ್ದಾರೆ.


G1News ವತಿಯಿಂದ ಅಧ್ಯಕ್ಷರಾದ ಶ್ರೀ ಡಿ ಕೆಂಪಯ್ಯರವರಿಗೆ ಅಭಿನಂದನೆಗಳು 💐💐


ನಿಮ್ಮ ಧ್ವನಿ ನಮ್ಮ ಸುದ್ದಿ 📢

G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ