ಶಿಕ್ಷಣವು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ: ಶಾಂತು ಆರ್ ಬೆಳ್ಳಿ

ಶಿಕ್ಷಣವು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ: ಶಾಂತು ಆರ್ ಬೆಳ್ಳಿ.

ಕೊಳ್ಳೇಗಾಲ, ಆ. 01: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಿಲ್ಕಲ್ ಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಿದ ಕೊಳ್ಳೇಗಾಲ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಶಾಂತು ಆರ್ ಬೆಳ್ಳಿ ರವರು ಮಾತನಾಡಿ ಶಿಕ್ಷಣವು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣ ಹಂತದಲ್ಲಿಯೇ ಶಿಸ್ತು, ಪರಿಶ್ರಮ ಮತ್ತು ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಚಿತ ನೋಟ್‌ಬುಕ್‌ಗಳನ್ನು ಪಡೆದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಿವಮಾಧು , ರಾಜೇಂದ್ರ ಸಾಮ್ರಾಟ್, ಶಿಕ್ಷಕಿ ಮಂಗಳ, ಹಾಗೂ. ನಟರಾಜು , ಅತಿಥಿ ಶಿಕ್ಷಕಿ ಮನಿಷಾ ಎಸ್.ಆರ್.ಬೆಳ್ಳಿ, ಗೌತಮ್ ಉಪಸ್ಥಿತರಿದ್ದರು.

ನಿಮ್ಮ ಧ್ವನಿ ನಮ್ಮ ಸುದ್ದಿ 📢

G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ