ಚಾಮುಂಡೇಶ್ವರಿ ತಾಯಿಯ ಜನ್ಮೋತ್ಸವ ಆಚರಣೆ.

 ಚಾಮುಂಡೇಶ್ವರಿ ತಾಯಿಯ ಜನ್ಮೋತ್ಸವ ಆಚರಣೆ.

ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ  ಚಾಮುಂಡೇಶ್ವರಿ ತಾಯಿ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ಜನ್ಮದಿನೋತ್ಸವದ ಪ್ರಯುಕ್ತ ವಿಶೇಷ ಧಾರ್ಮಿಕ  ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿದವು...

ತಾಯಿಗೆ ಮುಂಜಾನೆ ದೇವಿಗೆ ವಿಶೇಷ ದ್ರವ್ಯ ಅಭಿಷೇಕ, ಹಾಗೂ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಈ ವೇಳೆ ಮಹಿಳೆಯರು ತಾಯಿ ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದರು. 

ಈ ಹಿನ್ನೆಲೆಯಲ್ಲಿ ಅಕ್ಕ ಪಕ್ಕದ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಾಯಿಯ ದರ್ಶನ ಪಡೆದು ಆಶೀರ್ವಾದ ಪಡೆದರು.. 

ಪ್ರತಿ ಪ್ರತಿವರ್ಷವು ತಾಯಿ ಚಾಮುಂಡೇಶ್ವರಿಯ ಜನ್ಮದಿನ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿ ತಾಯಿಯ ಕೃಪೆಗೆ ಪಾತ್ರರಾಗುತ್ತಾರೆ..

ಕ್ಷೇತ್ರದ ಶಾಸಕ ಎ ಆರ್ ಕೃಷ್ಣಮೂರ್ತಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷ ಚಂದ್ರು ದೇವಾಲಯಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಭಕ್ತರು ಹಾಗೂ ದಾನಿಗಳು ಪ್ರತಿ ವರ್ಷವೂ ಉದಾರವಾಗಿ ಧನಸಹಾಯ ನೀಡುತ್ತಿದ್ದು, ಅವರ ಸಹಕಾರದಿಂದ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ.....

ಈ ಸಂಧರ್ಭದಲ್ಲಿ  ಗ್ರಾಮದ ಹದಿಮೂರು ಕೋಮಿನ ಯಜಮಾನರುಗಳು, ಗೌಡರು,ಮುಖಂಡರು, ಯುವಕರು, ಹಾಗೂ ಭಕ್ತಾದಿಗಳು ತಾಯಿಯ ಕೃಪೆಗೆ ಪಾತ್ರರಾಗಿದ್ದರು.

ನಿಮ್ಮ ಧ್ವನಿ ನಮ್ಮ ಸುದ್ದಿ 📢

G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹರವೆ ಶ್ರೀ ಗುರುಮಲ್ಲೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

ಇನ್‌ಸ್ಪೈರ್ ಅವಾರ್ಡ್‌ಗೆ ಯಳಂದೂರಿನ 5 ವಿದ್ಯಾರ್ಥಿಗಳು ಆಯ್ಕೆ: ಮೆಲ್ಲಹಳ್ಳಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಗರಿ`

ಹೊನ್ನೂರು ಪ್ರಕಾಶ್ ಬಿಗ್ ಬಾಸ್ ಕನ್ನಡಕ್ಕೆ ಬರಲಿ: ಚಾಮರಾಜನಗರ ರೈತ ಹೋರಾಟಗಾರನಿಗೆ ಅಭಿಮಾನಿಗಳ ಆಗ್ರಹ