ಸಿಲ್ಕಲ್‌ಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ – ಸಾರ್ವಜನಿಕರ ಆಕ್ರೋಶ
ಕೊಳ್ಳೇಗಾಲ, ಆ. 6: ತಾಲ್ಲೂಕಿನ ಸಿಲ್ಕಲ್‌ಪುರ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಮರ್ಪಕವಾಗಿ ನೀರು ಸರಬರಾಜಾಗದ ಕಾರಣ ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಕುಡಿಯುವ ನೀರಿಗಾಗಿ ದೂರದ ಪ್ರದೇಶಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಇರುವ ಕೊಳವೆಬಾವಿಗಳು ಮತ್ತು ನೀರು ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೆಲ ಪ್ರದೇಶಗಳಲ್ಲಿ ಹಲವು ದಿನಗಳಿಂದ ನೀರು ಬಂದಿಲ್ಲ ಎನ್ನಲಾಗಿದ್ದು, ಜನರು ಖಾಸಗಿ ಟ್ಯಾಂಕರ್‌ಗಳಿಂದ ಹಣ ನೀಡಿ ನೀರು ಖರೀದಿಸುವ ಅನಿವಾರ್ಯ ಸ್ಥಿತಿ ಉಂಟಾಗುವ ವಾತಾವರಣ ವಾಗಿದೆ.
ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಶಾಲಾ ಮಕ್ಕಳು ಹಾಗೂ ಕೂಲಿ ಕಾರ್ಮಿಕರೂ ತೊಂದರೆ ಅನುಭವಿಸುತ್ತಿದ್ದಾರೆ. ಬೇಸಿಗೆ ನಂತರವೂ ನೀರಿನ ಸಮಸ್ಯೆ ಮುಂದುವರಿದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮಸ್ಥರು ಹಲವು ಬಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ಅಧಿಕಾರಿಗಳ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ, ಶಾಶ್ವತ ಪರಿಹಾರ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಹಾಳಾಗಿರುವ ಪೈಪ್‌ಲೈನ್‌ಗಳ ದುರಸ್ತಿ, ಬೋರ್‌ವೆಲ್‌ಗಳ ನಿರ್ವಹಣೆ ಹಾಗೂ ನಿಯಮಿತವಾಗಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ಗ್ರಾಮಸ್ಥರು ನೀರು ಎಂಬುದು ನಮ್ಮ ಮೂಲಭೂತ ಹಕ್ಕು ಕುಡಿಯುವ ನೀರಿಗಾಗಿ ಪ್ರತಿದಿನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಮಧ್ಯಪ್ರವೇಶಿಸಿ ಸಿಲ್ಕಲ್‌ಪುರ ಗ್ರಾಮಕ್ಕೆ ನಿರಂತರ ಮತ್ತು ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ