ಚಾಮರಾಜನಗರವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ - ಅಭಿವೃದ್ಧಿ ಹೋರಾಟ ಸಮಿತಿ ಆಗ್ರಹ
ಚಾಮರಾಜನಗರ:ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಆಗ್ರಹಿಸಿದೆ.
ಸಮಿತಿಯು ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಜಿಲ್ಲೆಯ ಒಟ್ಟು 69.91 ಲಕ್ಷ ಹೆಕ್ಟೇರ್ ಭೌಗೋಳಿಕ ವಿಸ್ತೀರ್ಣದಲ್ಲಿ 29.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ತಿಳಿಸಿದೆ. ಜಿಲ್ಲೆಯ 4 ತಾಲೂಕು, 16 ಹೋಬಳಿ, 424 ಹಳ್ಳಿಗಳಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದೆ.
ಜಿಲ್ಲಾಧ್ಯಕ್ಷ ಕೆ. ವೀರಭದ್ರ ಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಮಲ್ಲೇಶ್ ಯು.ಬಿ. ಅವರು ಮಾತನಾಡಿ, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಿಮ್ಮ ಧ್ವನಿ ನಮ್ಮ ಸುದ್ದಿ 📢
G1 NEWS Honnur - ಜನರ ಪರ ಸಮಸ್ಯೆ ಇದ್ರೆ ತಕ್ಷಣ ತಿಳಿಸಿ: 9964481518 Follow ಮಾಡಿ ಮತ್ತು Share ಮಾಡಿ 🙏

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ