ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ.
ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ ಸಂತೇಮರಹಳ್ಳಿ : ಇಲ್ಲಿನ ವೃತ್ತದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಬಸವಣ್ಣ ಮಾತನಾಡಿ ರಾಜ್ಯ ಸರ್ಕಾರ ಕದ್ದು ಮುಚ್ಚಿ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಟ್ಟು ರೈತರ ಬಾಯಿಗೆ ಮಣ್ಣು ಹಾಕುವ ಕೆಲಸಕ್ಕೆ ಮಾಡುವುದು ಖಂಡನೀಯ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರು ಸಂಕಷ್ಟಕ್ಕೆ ಸಿಲುಕಿದರು ತಮಿಳು ನಾಡಿಗೆ ನೀರು ಹರಿಸುವುದನ್ನು ಮೊದಲು ನಿಲ್ಲಿಸಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ರೈತರು ಟೈರ್ ಗೆ ಬೆಂಕಿ ಹಚ್ಚುವ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಘಂಟೆ ರವಾನಿಸಿದ್ದಾರೆ. ಕಾವುದವಾಡಿ ನಾಗೇಶ್ ಮಾತನಾಡಿ ರಾಜ್ಯಕ್ಕೆ ಭರಬಂದು ಬಾವಿಗಳಲ್ಲಿ ನೀರಿಲ್ಲದೆ ಕೆರೆಕಟ್ಟೆಗಳು ಒಣಗುತ್ತಿದ್ದರು ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ನಮ್ಮ ಕರ್ನಾಟಕ ಸರ್ಕಾರ ತಮಿಳು...