ಭೂಮಿ ಪೂಜೆಗೆ ಚಾಲನೆ ನೀಡಿದ ಶಾಸಕ ಎ ಆರ್ ಕೃಷ್ಣ ಮೂರ್ತಿ
ಸಂತೇಮರಹಳ್ಳಿ : ಹೋಬಳಿಗೆ ಒಳಪಡುವ ವಿವಿಧ ಗ್ರಾಮಗಳಿಗೆ ಭೂಮಿ ಪೂಜೆಗೆ ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣ ಮೂರ್ತಿ ಚಾಲನೆ ನೀಡಿದರು. ವಿವಿಧ ಗ್ರಾಮಗಳಾದ ಚುಂಗಡಿಪುರ, ಹೊಸಮೋಳೆ, ನಡಕಲುಮೋಳೆ, ಕಾವುದವಾಡಿ,ತೆಳ್ಳನೂರು, ಬಾನಹಳ್ಳಿ ಗ್ರಾಮಗಳಿಗೆ 3 ಕೋಟಿಗೂ ಅಧಿಕ ರೂ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಕಳೆದ ಮೂರು ವರ್ಷದಲ್ಲಿ 500 ಕೋಟಿಗೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ ಹಾಗೂ ಮುಂಬರುವ ದಿನಗಳಲ್ಲಿ ಹಲವಾರು ಯೋಜನೆಗಳಿಗೆ ಈಗಾಗಲೇ ಪ್ರಸ್ತಾವನೆ ನೀಡಲಾಗಿದೆ. ಕಳೆದ ಮೂರು ವರ್ಷಗಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನ ಕೈಗೊಂಡು ಅಭಿವೃದ್ಧಿ ಮಾಡಿದ್ದಾರೆ.ದೇಶದಲ್ಲಿ ಅತ್ಯಂತ ಜನಪ್ರಿಯ ಮುಖ್ಯ ಮಂತ್ರಿ ಎಂದೇ ಕ್ಯಾತಿಯಾಗಿದ್ದಾರೆ, ಮ್ಯಾನ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ರವರು ರಾಜ್ಯವನ್ನು ಮುನ್ನೆಡೆಸುವ ಅದಿಯಲ್ಲಿ ಮುನ್ನಡೆಯಲ್ಲಿದ್ದಾರೆ ಎಂದರೆ ತಪ್ಪಾಗಲಾರದು.ಬಾಕಿ ಇರುವ ಎರಡು ವರ್ಷದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಜನಪರ ಕೆಲಸಗಳಿಗೆ ಒತ್ತು ನೀಡುವುದಾಗಿ ತಿಳಿಸಿದರು. ಕ್ಷೇತ್ರದ ಎಲ್ಲಾ ವರ್ಗದ ಸಮುದಾಯಗಳಿಗೂ ಅನುದಾನ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಕೈಗೊಂಡಿದ್ದೇನೆ.ಈಗಾಗಲೇ ಹಲವಾರು ನೀರಾವರಿ ಯೋಜನೆ ಸರ್ಕಾರಕ್ಕೆ ಪ್ರಸ್ತಾವನೆಗೆ ಚಾಲನೆ ನೀಡಲಾಗಿದೆ ಎಂದರು. ಈ ಸಂದರ್ಭದ...