ಪೋಸ್ಟ್‌ಗಳು

ಯಳಂದೂರಿನಲ್ಲಿ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್‌ಗೆ ಅದ್ದೂರಿ ಸ್ವಾಗತ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಯಳಂದೂರಿನಲ್ಲಿ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್‌ಗೆ ಅದ್ದೂರಿ ಸ್ವಾಗತ

ಇಮೇಜ್
  ವರದಿ: ಗೂಳಿಪುರ ಮಣಿಕಂಠ ನಾಯಕ್    ಯಳಂದೂರಿನಲ್ಲಿ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್‌ಗೆ ಅದ್ದೂರಿ ಸ್ವಾಗತ ಯಳಂದೂರು, ಜು.10: ಬೆಂಗಳೂರು ಮಲ್ಲೇಶ್ವರಂ ಶಾಸಕರು, ಒಕ್ಕಲಿಗ ಸಮುದಾಯದ ಹಿರಿಯ ಮುಖಂಡರು ಹಾಗೂ ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಗುರುವಾರ ಯಳಂದೂರು ಮೂಲಕ ಸಾಗಿದ ವೇಳೆ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ಚಾಮರಾಜನಗರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಅವರನ್ನು ಯಳಂದೂರು ಪಟ್ಟಣದ ಅರಣ್ಯ ಇಲಾಖೆ ಮುಂಭಾಗದ ಬೈಪಾಸ್ ರಸ್ತೆಯಲ್ಲಿ ತಡೆದು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಮುಖಂಡರು ಹಾರ ಹಾಕಿ, ಶಾಲು ಹೊದಿಸಿ ಗೌರವ ಸಮರ್ಪಿಸಿದರು.  ಸ್ವಾಗತದ ನಂತರ ಸಮುದಾಯದ ಅಭಿವೃದ್ಧಿ ಮತ್ತು ಸಂಘಟನೆ ಕುರಿತು ಮುಖಂಡರು ಡಾ. ಅಶ್ವತ್ಥ್ ನಾರಾಯಣ್ ಅವರೊಂದಿಗೆ ಸಂಕ್ಷಿಪ್ತ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮುಖಂಡರು ಕೆ.ಪಿ ಪ್ರಕಾಶ್, ದಾಸನಹುಂಡಿ ಬಾಬು, ಕುಮಾರ್ ,ಗೋವಿಂದ, ವಡಗೆರೆ ರೇವಣ್ಣ, ಗುಂಬಳ್ಳಿ ಸುಂದ್ರಾ ಇತರರು ಹಾಜರಿದ್ದರು.