ಸಚಿವ ಸ್ಥಾನಕ್ಕಾಗಿ ಅಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಸಂತೇಮರಹಳ್ಳಿ: ಶಾಸಕ ಎ ಆರ್ ಕೃಷ್ಣ ಮೂರ್ತಿ ಅಭಿಮಾನಿ ಬಳಗದ ವತಿಯಿಂದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಂತೇಮರಹಳ್ಳಿ ವೃತ್ತದಲ್ಲಿ ಜಮಾಯಸಿ ಘೋಷಣೆ ಕೂಗುತ್ತ ಈ ಬಾರಿ ಸಚಿವ ಸಂಪುಟದಲ್ಲಿ ಎ ಆರ್ ಕೃಷ್ಣ ಮೂರ್ತಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅಧ್ಯಕ್ಷ ಎಚ್ ವಿ ಚಂದ್ರು ಮಾತನಾಡಿ ವಿವಿಧ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ಲಭಿಸಿದೆ ಜಿಲ್ಲೆಯಲ್ಲಿ ಲಭಿಸಿದೆ ಆದರೆ ಜಿಲ್ಲೆಯ ದಲಿತ ಶಾಸಕರಿಗೆ ಒಮ್ಮೆಯೂ ಸಚಿವ ಸ್ಥಾನ ಲಭಿಸಿಲ್ಲಿ ಹಾಗಾಗಿ ಬಾರಿ ಶಾಸಕ ಎ ಆರ್ ಕೃಷ್ಣ ಮೂರ್ತಿಯವರಿಗೆ ಮಾನ್ಯ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ನಂತರ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಮಾತನಾಡಿ ಈ ಕ್ಷೇತ್ರ ಕಂಡ ಅಪ್ರತಿಮ ರಾಜಕಾರಣಿ ಗುರುತಿಸಿಕೊಂಡು ಕ್ಷೇತ್ರಕ್ಕೆ 500 ಕೋಟಿಗೂ ಅಧಿಕ ಅನುದಾನ ತಂದು ಕ್ಷತ್ರದ ಅಭಿವೃದ್ಧಿಯಾಗಲು ಸಾಕ್ಷಿಯಾಗಿದ್ದರೆ ಹಾಗಾಗಿ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ನಂತರ ಕಾಂಗ್ರೆಸ್ ಮುಖಂಡ ಮಹಾದೇವ ಪ್ರಸ...