ನೂತನ ವರ್ಷದ ವಿದ್ಯಾರ್ಥಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮ
ನೂತನ ವರ್ಷದ ವಿದ್ಯಾರ್ಥಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜು ನಂಜನಗೂಡಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ನಂಜನಗೂಡಿನ ಜೆಎಸ್ಎಸ್ ಪದವಿ ಕಾಲೇಜು ಪ್ರಾಚಾರ್ಯರಾದ ಡಾಕ್ಟರ್ ಹೊನ್ನೇಗೌಡ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನಂತರ ಮಾತನಾಡಿ ವಿದ್ಯಾರ್ಥಿಗಳನ್ನು ಕುರಿತು ವಿದ್ಯಾರ್ಥಿ ಜೀವನದಲ್ಲಿ ಎಲ್ ಎಸ್ ಆರ್ ಡಬ್ಲ್ಯೂ ಅಂದರೆ ಕೇಳುವ ಆಸಕ್ತಿ, ಮಾತನಾಡುವ ಆಸಕ್ತಿ, ಓದುವ ಆಸಕ್ತಿ ಹಾಗೂ ಬರೆಯುವ ಆಸಕ್ತಿಗಳನ್ನು ಅಳವಡಿಸಿಕೊಂಡರೆ ಉತ್ತಮ ವಿದ್ಯಾರ್ಥಿಯಾಗಿ ಭವಿಷ್ಯದಲ್ಲಿ ಉನ್ನತ ಮಟ್ಟಕ್ಕೆ ತಲುಪಬಹುದು ಎಂದರು. ಕಾರ್ಯಕ್ರಮದ ಪ್ರಾಸ್ತವಿಕ ನುಡಿಯನ್ನು ಸಂಯೋಜನಾಧಿಕಾರಿಗಳಾದ ಶ್ರೀ ಜಿ ಪ್ರಭು ಪ್ರಸಾದ್ ರವರು ಕಾಲೇಜಿನಲ್ಲಿ ಇರುವ ಸೌಲಭ್ಯಗಳ ಉಪಯೋಗ ಹಾಗೂ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಕ್ರೀಡಾ ಚಟುವಟಿಕೆಗಳು ಮತ್ತು ಸಂಸ್ಥೆಯ ಚಟುವಟಿಕೆಗಳ ಮುಖಾಂತರ ಅನಾವರಣಗೊಳಿಸಲು ಈ ಕಾರ್ಯಕ್ರಮ ವೇದಿಕೆಯಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯರಾದ ಶ್ರೀ ಎನ್ ವಿದ್ಯಾಶಂಕರ್ ರವರು ಡಿಪ್ಲೋಮಾ ಕೋರ್ಸ್ ಗಳನ್ನು ವ್ಯಾಸಂಗ ಮಾಡುವುದರಿಂದ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗಗಳನ್ನು ...