ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ
ವರದಿ: ಲಕ್ಕೂರು ಚಂದ್ರು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ. ಗುಂಡ್ಲುಪೇಟೆ : ಪಟ್ಟಣದ ಜೆಎಸ್ಎಸ್ ಪದವಿ ಕಾಲೇಜಿನ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ವಿವಿಧ ಇಲಾಖೆಗಳು ಹಾಗೂ ಜೆಎಸ್ಎಸ್ ಕಾಲೇಜಿನ ಸಂಯುಕ್ತಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾದೀಶ ಈಶ್ವರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಗಮನ ಹರಿಸಬೇಕು. ಹದಿನೆಂಟು ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡಬಾರದು. ಗಂಡು ಮಕ್ಕಳಿಗೆ 21 ವರ್ಷದ ಒಳಗೆ ವಿವಾಹ ಮಾಡಬಾರದು ಎಂದರು. ಬಾಲ್ಯ ವಿವಾಹ, ವೇಶ್ಯಾವಾಟಿಕೆ, ಅಂಗಾಂಗಗಳ ಕಳ್ಳಸಾಗಾಣೆ, ಬಲವಂತದ ದುಡಿಮೆ, ಹಾಗೂ ಲೈಂಗಿಕ ಶೋಷಣೆಯಂತಹ ಕೃತ್ಯಗಳು ಮಾನವ ಕಳ್ಳ ಸಾಗಾಣಿಕೆಯ ರೂಪಗಳಾಗಿವೆ. ಇವೆಲ್ಲವನ್ನೂ ತಡೆಗಟ್ಟಲು ಭಾರತೀಯ ನ್ಯಾಯ ಸಂಹಿತೆ, ಮಕ್ಕಳ ರಕ್ಷಣಾ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಸೇರಿದಂತೆ ಹಲವು ಕಾನೂನುಗಳು ಜಾರಿಯಲ್ಲಿವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಗುಂಡ್ಲುಪೇಟೆ ಎರಡು ರಾಜ್ಯಗಳ ಗಡಿ ಭಾಗವಾದ್ದರಿಂದ ಉದ್ಯೋಗದ ಆಮಿಷವನ್ನು ...