ಪೋಸ್ಟ್‌ಗಳು

ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ಇಮೇಜ್
ವರದಿ: ಲಕ್ಕೂರು ಚಂದ್ರು   ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ. ಗುಂಡ್ಲುಪೇಟೆ : ಪಟ್ಟಣದ ಜೆಎಸ್ಎಸ್ ಪದವಿ ಕಾಲೇಜಿನ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ವಿವಿಧ ಇಲಾಖೆಗಳು ಹಾಗೂ ಜೆಎಸ್ಎಸ್ ಕಾಲೇಜಿನ ಸಂಯುಕ್ತಶ್ರಯದಲ್ಲಿ  ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾದೀಶ ಈಶ್ವರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಗಮನ ಹರಿಸಬೇಕು. ಹದಿನೆಂಟು ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡಬಾರದು. ಗಂಡು ಮಕ್ಕಳಿಗೆ 21 ವರ್ಷದ ಒಳಗೆ ವಿವಾಹ ಮಾಡಬಾರದು  ಎಂದರು. ಬಾಲ್ಯ ವಿವಾಹ, ವೇಶ್ಯಾವಾಟಿಕೆ, ಅಂಗಾಂಗಗಳ ಕಳ್ಳಸಾಗಾಣೆ, ಬಲವಂತದ ದುಡಿಮೆ, ಹಾಗೂ ಲೈಂಗಿಕ ಶೋಷಣೆಯಂತಹ ಕೃತ್ಯಗಳು ಮಾನವ ಕಳ್ಳ ಸಾಗಾಣಿಕೆಯ ರೂಪಗಳಾಗಿವೆ. ಇವೆಲ್ಲವನ್ನೂ ತಡೆಗಟ್ಟಲು ಭಾರತೀಯ ನ್ಯಾಯ ಸಂಹಿತೆ, ಮಕ್ಕಳ ರಕ್ಷಣಾ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಸೇರಿದಂತೆ ಹಲವು ಕಾನೂನುಗಳು ಜಾರಿಯಲ್ಲಿವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಗುಂಡ್ಲುಪೇಟೆ ಎರಡು ರಾಜ್ಯಗಳ ಗಡಿ ಭಾಗವಾದ್ದರಿಂದ ಉದ್ಯೋಗದ ಆಮಿಷವನ್ನು ...

ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ.

ಇಮೇಜ್
  ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರಿಂದ ಪ್ರತಿಭಟನೆ  ಸಂತೇಮರಹಳ್ಳಿ : ಇಲ್ಲಿನ ವೃತ್ತದಲ್ಲಿ   ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಬಸವಣ್ಣ ಮಾತನಾಡಿ ರಾಜ್ಯ ಸರ್ಕಾರ ಕದ್ದು ಮುಚ್ಚಿ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಟ್ಟು ರೈತರ ಬಾಯಿಗೆ ಮಣ್ಣು ಹಾಕುವ ಕೆಲಸಕ್ಕೆ ಮಾಡುವುದು ಖಂಡನೀಯ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.  ಈಗಾಗಲೇ ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರು ಸಂಕಷ್ಟಕ್ಕೆ ಸಿಲುಕಿದರು ತಮಿಳು ನಾಡಿಗೆ ನೀರು ಹರಿಸುವುದನ್ನು ಮೊದಲು ನಿಲ್ಲಿಸಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ರೈತರು ಟೈರ್ ಗೆ ಬೆಂಕಿ ಹಚ್ಚುವ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಘಂಟೆ ರವಾನಿಸಿದ್ದಾರೆ. ಕಾವುದವಾಡಿ ನಾಗೇಶ್ ಮಾತನಾಡಿ ರಾಜ್ಯಕ್ಕೆ ಭರಬಂದು ಬಾವಿಗಳಲ್ಲಿ ನೀರಿಲ್ಲದೆ ಕೆರೆಕಟ್ಟೆಗಳು ಒಣಗುತ್ತಿದ್ದರು ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ನಮ್ಮ ಕರ್ನಾಟಕ ಸರ್ಕಾರ ತಮಿಳು...

ಯಳಂದೂರಿನಲ್ಲಿ ಅದ್ಧೂರಿಯಾಗಿ ನಡೆದ ಬಸವ ಜಯಂತಿ ಮಹೋತ್ಸವ

ಇಮೇಜ್
ಯಳಂದೂರಿನಲ್ಲಿ ಅದ್ಧೂರಿಯಾಗಿ ನಡೆದ  ಬಸವ ಜಯಂತಿ ಮಹೋತ್ಸವ ಯಳಂದೂರು, ಜು. 25: ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು, ಜಗಜ್ಯೋತಿ ಶ್ರೀ ಬಸವೇಶ್ವರರ 893ನೇ ಜಯಂತಿ ಅಂಗವಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಬಸವ ಜಯಂತಿ ಆಚರಣಾ ಸಮಿತಿ ಹಾಗೂ ಬಸವ ಬಳಗಗಳ ಒಕ್ಕೂಟ, ಯಳಂದೂರು ತಾಲ್ಲೂಕು ವತಿಯಿಂದ ಶನಿವಾರ ಆಯೋಜಿಸಿದ್ದ ಬಸವ ಜಯಂತಿ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಬಸವ ಅನುಯಾಯಿಗಳು, ಹಳ್ಳಿಕಾರ್ ಹೋರಿಗಳು, ಎತ್ತಿನಗಾಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ ಆಟೋಗಳಲ್ಲಿ ಶ್ರೀ ಬಸವೇಶ್ವರರು ಮತ್ತು ಶರಣರ ಭಾವಚಿತ್ರಗಳನ್ನು ಪುಷ್ಪಾಲಂಕೃತ ಪಲ್ಲಕ್ಕಿಗಳಲ್ಲಿ ತಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು. ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ನಂದಿ ಧ್ವಜ ಹಾಗೂ ಶ್ರೀ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.  ಬಳಿಕ ಆಶೀರ್ವಚನ ನೀಡಿ, ಬಸವಣ್ಣನವರು ಸಾರಿದ ಸಮಾನತೆ, ಸೌಹಾರ್ದತೆ ಮತ್ತು ಕಾಯಕದ ತತ್ವಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿವೆ. "ವಚನಗಳು ಕೇವಲ ಓದುವುದಕ್ಕಲ್ಲ, ಬದುಕುವುದಕ್ಕೆ" ಎಂದು ಹೇಳಿದ ಅವರು, ಯುವಜನತೆ ಬಸವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ...

ಬೆಲ್ಲ ಉತ್ಪಾದನೆ ಕುರಿತು ಪಿಎಚ್.ಡಿ. ಪಡೆದ ಕೆಂಪನಪುರ ಮಹದೇವಸ್ವಾಮಿಗೆ ಬಸವಪರ ಸಂಘಟನೆಗಳಿಂದ ಸನ್ಮಾನ

ಇಮೇಜ್
 ಚಾಮರಾಜನಗರ ಜುಲೈ 22: ತಾಲ್ಲೂಕಿನ ಕೆಂಪನಪುರ ಗ್ರಾಮದ ಡಾ.ಮಹದೇವಸ್ವಾಮಿ ರವರು ಅಲೆಮನೆ ವ್ಯವಸ್ಥೆಗೆ ಸಂಬಂಧಿಸಿದ ಸಂಶೋಧನೆಯ ಮೂಲಕ ಪಿ ಎಚ್ ಡಿ ಪಡೆದ ಚಾಮರಾಜನಗರದ ಸಿದ್ದಾರ್ಥ ಕಾಲೇಜು ಪ್ರಾಂಶುಪಾಲ ಡಾ. ಮಹದೇವಸ್ವಾಮಿ ರವರನ್ನು ಪ್ರಮುಖರು ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಿದರು  ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಪಂಡಿತರು ಹಾಗೂ ಎಮ್ ಸಿ ಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಮಹಾದೇವಸ್ವಾಮಿ ಅವರು ಚಾಮರಾಜನಗರ ಜಿಲ್ಲೆಯ ಪ್ರಮುಖ ಕೃಷಿ ಆಧಾರಿತ ಉತ್ಪನ್ನವಾದ ಬೆಲ್ಲ ಉತ್ಪಾದನೆ ಕುರಿತು ಪಿ ಎಚ್ ಡಿ ಪಡೆದಿರುವುದು ಇಡೀ ಜಿಲ್ಲೆಯ ಹೆಮ್ಮೆ ಹಾಗೂ ಸಂತಸದ ವಿಷಯವಾಗಿದೆ ಎಂದು ಹೇಳಿದರು ಡಾಕ್ಟರ್ ಮಹದೇವಸ್ವಾಮಿ ಕೆಂಪನಪುರ ಅವರು ಕೃಷಿ ಪ್ರಧಾನ ಕುಟುಂಬದಲ್ಲಿ ಜನಿಸಿ ಬೆಳೆದವರಾಗಿದ್ದು ಇಂದಿಗೂ ಕೃಷಿಯನ್ನೇ ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡಿದ್ದಾರೆ ತಮ್ಮ ಜೀವನಾನುಭವ, ರೈತರ ಬದುಕಿನೊಂದಿಗೆ ಇರುವ ನಿಕಟ ಬಾಂಧವ್ಯ ಹಾಗೂ ಅಲೆಮನೆಗಳಲ್ಲಿ ಬೆಲ್ಲ ತಯಾರಿಕೆಯ ಅನುಭವವನ್ನು ಸಂಶೋಧನೆಯ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡಿರುವುದು ತಿಳಿಸಿದರು ಬೆಲ್ಲ ಉತ್ಪಾದನೆಯಲ್ಲಿ ಎದುರಾಗುವ ಸವಾಲುಗಳು, ಉತ್ಪಾದನಾ ವಿಧಾನಗಳು, ಗುಣಮಟ್ಟ ಸುಧಾರಣೆ, ಮಾರುಕಟ್ಟೆ ಸಮಸ್ಯೆಗಳು, ಅವುಗಳಿಗೆ ಅಗತ್ಯವಾದ ಪರಿಹಾರೋಪಾಯಗಳು ಕುರಿತು ನಡೆಸಿರುವ ಅಧ್ಯಯನವು ಮುಂದಿನ ಪೀಳಿಗೆಗೆ ರೈತ ಸಮುದಾಯಕ್ಕೆ ಹಾಗೂ ಸರ್ಕಾರದ ನೀತಿ ರೂಪಿಸುವ ಪ್ರಕ್ರಿಯೆಗೆ ಉಪಯೋಗ ಮ...

ರೇಷ್ಮೆ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಆದಾಯ ಗಳಿಸಿ ರೇಣುಕೇಶ್ ಕರೆ.

ಇಮೇಜ್
ವರದಿ: ಗೂಳಿಪುರ ಮಣಿಕಂಠ ನಾಯಕ್  ರೇಷ್ಮೆ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಆದಾಯ ಗಳಿಸಿ ರೇಣುಕೇಶ್ ಕರೆ. ಬೇಗೂರು: ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ (SVYM) ವಿವೇಕ ಗ್ರಾಮೀಣ ಜೀವನಧಾರ ಕೇಂದ್ರ, ಕುದೇರು ರೇಷ್ಮೆ ಕೃಷಿ ತರಬೇತಿ ಸಂಸ್ಥೆ, ರೇಷ್ಮೆ ಇಲಾಖೆ ಹಾಗೂ ಟೈಟನ್ ಕಂಪನಿ ಲಿಮಿಟೆಡ್ ಸಹಯೋಗದಲ್ಲಿ ರೇಷ್ಮೆ ಕೃಷಿ ಬೆಳೆಗಾರರಿಗಾಗಿ ಮೂರು ದಿನಗಳ ತರಬೇತಿ ಕಾರ್ಯಗಾರಕ್ಕೆ ಸೋಮವಾರ ದಂದು ಗುಂಡ್ಲುಪೇಟೆ ತಾಲೂಕಿನ ಬೇಗೂರು ಸರ್ಕಾರಿ ಐಟಿಐ ಕಾಲೇಜ್ ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಪಂಚಾಯಿತಿ ರೇಷ್ಮೆ ಇಲಾಖೆ ಉಪ ನಿರ್ದೇಶಕ ರೇಣುಕೇಶ್ ಉದ್ಘಾಟಿಸಿ ಮಾತನಾಡಿ ರೇಷ್ಮೆ ಕೃಷಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳು ಹಾಗೂ ಪ್ರೋತ್ಸಾಹ ದೊರೆಯುತ್ತಿದ್ದು ರೈತರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವೈಜ್ಞಾನಿಕ ಪದ್ಧತಿಯಲ್ಲಿ ರೇಷ್ಮೆ ಕೃಷಿ ಕೈಗೊಂಡರೆ ಉತ್ತಮ ಆದಾಯ ಗಳಿಸಬಹುದು ಎಂದು ತಿಳಿಸಿದರು. ರೈತರಿಗೆ ಇಲಾಖೆಯಿಂದ ನಿರಂತರವಾಗಿ ತಾಂತ್ರಿಕ ಮಾರ್ಗದರ್ಶನ ನೀಡಲಾಗುತ್ತಿದ್ದು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್  ಮತ್ತು ರೇಷ್ಮೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಇಂತಹ ತರಬೇತಿಗಳು ರೈತರ ಅಭಿವೃದ್ಧಿಗೆ ಪೂರಕವಾಗಿದೆ ಎಂದರು, ತರಬೇತಿಯಲ್ಲಿ ಭಾಗವಹಿಸಿರುವ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನ ವೈಜ್ಞಾನಿಕ ಬೇಸಾಯ ಪದ್ಧತಿ ಹಾಗೂ ರೇಷ್ಮೆ ಉತ್ಪಾದನೆ ಹೆಚ್...

ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕೂ ವಿಭಾಗದ ನೂತನ ಅಧ್ಯಕ್ಷರಾಗಿ ಡಿ ಕೆಂಪಯ್ಯ ಆಯ್ಕೆ.

ಇಮೇಜ್
ವರದಿ:G1 ನ್ಯೂಸ್  ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕೂ ವಿಭಾಗದ ನೂತನ ಅಧ್ಯಕ್ಷರಾಗಿ ಡಿ ಕೆಂಪಯ್ಯ ಆಯ್ಕೆ.  ಕೊಳ್ಳೇಗಾಲ 21: ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಮಾನ್ಯ ಅಧ್ಯಕ್ಷರಾದ ಡಾಕ್ಟರ್ ಅಭಿಷೇಕ್ ಮನು ಸಿಂಘ್ವಿ ರವರ ಆದೇಶದ ಮೇರೆಗೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ ಕೆ ಹರಿಪ್ರಸಾದ್ ರವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಕಾನೂನು ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೂತನ ಅಧ್ಯಕ್ಷರಾಗಿ ಕೊಳ್ಳೇಗಾಲ ತಾಲೂಕು ವಕೀಲರ ಸಂಘದ ಕಾರ್ಯದರ್ಶಿಗಳಾದ ಸಿಲ್ಕಲ್ಪುರ ಗ್ರಾಮದ ಶ್ರೀ ಡಿ ಕೆಂಪಯ್ಯ ಅವರನ್ನು ನೇಮಕ ಮಾಡಲಾಯಿತು. ಈ ನೇಮಕಾತಿಯು ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ನೀರಿಕ್ಷೆ ಮೂಡಿಸಿದ್ದು ಕಾನೂನು ಹಕ್ಕುಗಳು ಹಾಗೂ ಮಾಹಿತಿ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕರ ಹಕ್ಕುಗಳ ರಕ್ಷಣೆಗೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದರು. ನಂತರ ಮಾತನಾಡಿ ಶ್ರೀ ಡಿ ಕೆಂಪಯ್ಯ ರವರು ಮಾತನಾಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವುದು ಸಂಘಟನೆಯನ್ನು ಮಟ್ಟದಲ್ಲಿ ಇನ್ನಷ್ಟು ಸದೃಢಗೊಳಿಸುವುದು ಹಾಗೂ ಜನಸೇವೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ ಅವರ ನೇಮಕಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿ...

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಜೆಡಿಎಸ್ ನಿಂದ ಶ್ರದ್ಧಾಂಜಲಿ.

ಇಮೇಜ್
ವರದಿ: ಗೂಳಿಪುರ ಮಣಿಕಂಠ ನಾಯಕ್   ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಜೆಡಿಎಸ್ ನಿಂದ ಶ್ರದ್ಧಾಂಜಲಿ.  ಯಳಂದೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿ ಯಳಂದೂರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಬಿ ಪುಟ್ಟಸ್ವಾಮಿ ಅಭಿಮಾನಿಗಳ ಬಳಗ ಹಾಗೂ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು ಸಭೆಯಲ್ಲಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಎರಡು ನಿಮಿಷಗಳ ಮೌನಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.  ಬಳಿಕ ಮಾತನಾಡಿದ ಮುಖಂಡರಾದ ಸಿದ್ದರಾಜನಾಯಕ ಟೌನ್ ಘಟಕದ ಅಧ್ಯಕ್ಷ ಚಂದ್ರು ಹಾಗೂ ಮದ್ದೂರು ನಿಂಗರಾಜಪ್ಪ ಚೆನ್ನಮ್ಮ ರವರು ಸರಳತೆ, ಸೌಜನ್ಯ ಮತ್ತು ಕುಟುಂಬ ಮೌಲ್ಯಗಳಿಗೆ ಹೆಸರುವಾಸಿಯಾಗಿದ್ದು ಅವರ ಜೀವನ ಎಲ್ಲರಿಗೂ ಮಾದರಿಯಾಗಿದೆ ಎಂದು ಸ್ಮರಿಸಿದರು ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದ್ದು ದೇವೇಗೌಡರ ಕುಟುಂಬದ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ ಎಂದು ಸಂತಾಪ ಸೂಚಿಸಿದರು,  ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಕೆಸ್ತೂರು ಆನಂದ್, ಪ್ರಧಾನ ಕಾರ್ಯದರ್ಶಿ ಅಂಬಳೆ ರವೀಶ್, ಖಜಾಂಚಿ ವೈ ಕೆ ಮೋಳೆ ಸೋಮಣ್ಣ, ಗುರುಲಿಂಗಯ್ಯ, ಜವರಶೆಟ್ಟಿ, ಯರಿಯೂರು ಜಯಣ್ಣ, ಒಡಗೆರೆ ಸುಂದರಣ್ಣ, ಯೋಗೇಂದ್ರ ಲಿಂಗರಾಜು, ಕುದೇರು ಶಂಕರ್, ಉಪ್ಪಿನ ಮೊ...